ಹೈಟೆಕ್ ಪದವಿ ಕಾಲೇಜಿಗೆ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭೇಟಿ…!

ಶಹಾಪುರ : ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಹೈಟೆಕ್ ಪದವಿ ಕಾಲೇಜು ನಿರ್ಮಾಣದ ಸ್ಥಳಕ್ಕೆ ಶಹಾಪುರದ ಜನಪ್ರಿಯ ಶಾಸಕರಾದ ಶರಣ ಬಸಪ್ಪಗೌಡ ದರ್ಶನಾಪುರ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಗ್ರಾಮಾಂತರ ಪ್ರದೇಶಗಳ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಸದುದ್ದೇಶದಿಂದ ಹೈಟೆಕ್ ಪದವಿ ಮಹಾವಿದ್ಯಾಲಯವನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ಈ ಸಂದರ್ಭದಲ್ಲಿ ಹೇಳಿದರು. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ಸುಮಾರು 10 ಎಕರೆ ಸ್ಥಳದಲ್ಲಿ ಹೈಟೆಕ್ ಪದವಿ ಕಾಲೇಜು ಸುಮಾರು 12 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಆಧ್ದರಿಂದ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಅಚ್ಚುಕಟ್ಟಾಗಿ ನಿರ್ಮಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ವರದಿ-ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಸಿನ್ನೂರ

Please follow and like us:

Related posts

Leave a Comment