ರಾಜಕೀಯ

ಪಕ್ಷ ಸಂಘಟನೆಗಾಗಿ ಶಹಾಪುರಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ…!

Published

on

ಶಹಾಪುರ :ರಾಜಕೀಯ ವಿದ್ಯಮಾನಗಳ ಕುರಿತು ಹಾಗೂ ಪಕ್ಷ ಸಂಘಟನೆಗಾಗಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನಾಳೆ ಶಹಾಪುರ ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಡಾ:ಶರಣಬೊಪಾರೆಡ್ಡಿ ನಾಯ್ಕಲ್ ತಿಳಿಸಿದ್ದಾರೆ. ಸಭೆಯನ್ನು ಶಹಾಪುರದ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಮೋಟಗಿ ರೆಸಿಡೆನ್ಸಿಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು ಈ ಸಭೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರುವಂತೆ ಪಕ್ಷದ ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ತಿಳಿಸಿದ್ದಾರೆ.ಮಧ್ಯಾಹ್ನ 1 ಗಂಟೆಗೆ ಸಭೆ ಪ್ರಾರಂಭವಾಗಿ 3 ಗಂಟೆಯ ಸುಮಾರಿಗೆ ಮುಕ್ತಾಯಗೊಳಿಸಿ ಮುಂದಿನ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರು ನಿರ್ಗಮಿಸುವರು ಎಂದು ತಿಳಿದು ಬಂದಿದೆ.ಪಕ್ಷದ ಹಿತೈಷಿಗಳು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ವರದಿ- ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಸಿನ್ನೂರ..

Click to comment

Trending

Exit mobile version