ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರಲು ಕಾರಣ ಯಾರು ಗೊತ್ತಾ?

ಬೆಂಗಳೂರು: ಕರ್ನಾಟಕದ ಸಿಂಗಂ ಅಂತಾನೇ ಖ್ಯಾತಿ ಪಡೆದಿರುವ ಅಣ್ಣಾಮಲೈ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ಅಣ್ಣಾಮಲೈ ಬಿಜೆಪಿ ಸೇರ್ಪಡೆಯಿಂದ ತಮಿಳುನಾಡಿನಲ್ಲಿ ಬಿಜೆಪಿ ಬಲಗೊಳ್ಳುತ್ತದೆ ಎನ್ನಲಾಗಿದೆ. ಇನ್ನು ಅಣ್ಣಾಮಲೈ ಬಿಜೆಪಿಗೆ ಸೇರಲು ಕಾರಣ ಕರ್ತರು ಯಾರು ಎಂಬುದು ಪ್ರಶ್ನೆ ಇತ್ತು. ಆದರೆ ಎಲ್ಲಾ ಪ್ರಶ್ನೆಗಳಿಗೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮೂಲಕ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಅಣ್ಣಾಮಲೈ ಬಿಜೆಪಿಗೆ ಸೇರಲು ಮುಖ್ಯಪಾತ್ರ ವಹಿಸಿದ್ದವರು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್. ಇತ್ತೀಚೆಗೆ ಪವನ್ ಕಲ್ಯಾಣ್ ಕೂಡ ಬಿಜೆಪಿ ವ್ಯಾಪ್ತಿಗೆ ತರುವಲ್ಲಿ ಸಂತೋಷ್ ಮುಖ್ಯಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಬಿ.ಎಲ್ ಸಂತೋಷ್, ಅಣ್ಣಾಮಲೈ ಅವರನ್ನ ಭೇಟಿ ಮಾಡಿ ಬಿಜೆಪಿಗೆ ಸೇರ್ಪಡೆಯಾಗುವಂತೆ ಆಹ್ವಾನಿಸಿದ್ದಾರೆ. 2021 ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆಗೆ ಹಾಗು ಪ್ರಚಾರಕ್ಕೆ ವರ್ಚಸ್ಸು ಹೊಂದಿದ್ದ ವ್ಯಕ್ತಿ ಬೇಕಿತ್ತು. ಹೀಗಾಗಿ ಮೊದಲಿಗರಿಗಾಗಿ ಅಣ್ಣಾಮಲೈ ಅವರನ್ನ ಕರೆತರುವಲ್ಲಿ ಬಿ.ಎಲ್ ಸಂತೋಷ್ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment