ಕೋವಿಡ್ ನಿಂದಾ ಸಂಕಷ್ಟಕ್ಕೀಡಾದವರಿಗೆ ಪರಿಹಾರ ನೀಡಬೇಕೆಂದು ಪ್ರತಿಭಟನೆ.!

ಮಳವಳ್ಳಿ: ಕೋವಿಡ್-೧೯ ಸಾಂಕ್ರಾಮಿಕ ರೋಗದಿಂದ ಸಂಕಷ್ಟಕ್ಕೀಡಾಗಿರುವ ಆದಾಯ ತೆರಿಗೆ ವ್ಯಾಪ್ತಿಯಲ್ಲಿಲ್ಲದ ಎಲ್ಲರಿಗೂ 8,500 ರೂ. ನಗದು ಪರಿಹಾರ ಮತ್ತು ಕುಟುಂಬಕ್ಕೆ ಅಗತ್ಯವಾಗಿರುವ ದಿನಸಿಯನ್ನು ಪ್ರತಿ ತಿಂಗಳು ನೀಡಬೇಕು ಎಂದು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಮಳವಳ್ಳಿ ಟೌನ್ ಶಾಖೆಯ ವತಿಯಿಂದ ಮಳವಳ್ಳಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಳವಳ್ಳಿ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ಹೊರಟು ಪ್ರಮುಖ ಬೀದಿಗಳ ಮೂಲಕ ಪುರಸಭೆ ಮುಂದೆ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮಳವಳ್ಳಿ ತಾಲ್ಲೂಕು ಸಮಿತಿ ಕಾರ್ಯದರ್ಶಿ ದೇವಿ ರವರು ದೇಶದಲ್ಲಿ ಕೋವಿಡ್ ೧೯ರ ಹಾವಳಿ ತೀವ್ರವಾಗುತ್ತಲೇ ಇದೆ ಈಗಾಗಲೇ ಐವತ್ತು ಸಾವಿರ ಭಾರತೀಯರು ಕೊರೊನ ಸೋಂಕಿಗೆ ಬಲಿಯಾಗಿದ್ದಾರೆ. 50ಲಕ್ಷ ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಆದರೆ ಎಲ್ಲರಿಗೂ ಒಳ್ಳೆಯ ದಿನಗಳ ಭವಿಷ್ಯ ನುಡಿಯುತ್ತಿದ್ದ ಜಾದೂಗಾರ ಮೋದಿ ತನ್ನ ವೈಫಲ್ಯವನ್ನು ಮರೆಮಾಚಲು ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ. ಲಾಕ್‌ಡೌನ್ ದೇಶದ ಬಹುಪಾಲು ಜನಗಳ ಮೇಲೆ,ಅದರಲ್ಲೂ ದಲಿತರು ಬುಡಕಟ್ಟು ಜನರು ಮಹಿಳೆಯರು ಅಲ್ಪಸಂಖ್ಯಾತರು ಮತ್ತು ವಿಕಲಾಂಗರ ಮೇಲೆ ಹೇಳತೀರದ ಸಂಕಷ್ಟಗಳನ್ನು ಹೇರಿತು ಕೇಂದ್ರ ಬಿಜೆಪಿ ಸರ್ಕಾರ ಅವರ ನೆರವಿಗೆ ಧಾವಿಸಲಿಲ್ಲ ಅಂತಹ ಕುಟುಂಬಗಳಿಗೆ ನಗದು ವರ್ಗಾವಣೆ ಮತ್ತು ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸಬೇಕೆಂಬ ಬೇಡಿಕೆಯನ್ನು ಈಡೇರಿಸುವುದನ್ನು ನಿರಾಕರಿಸುತ್ತಲೇ ಬಂದಿದೆ.ಸೋಂಕು ಹರಡುವುದನ್ನು ತಡೆಯುವಲ್ಲಿ ವಿಫಲವಾದ ಮೋದಿ ಸರ್ಕಾರ ಈಗಾಷ್ಟೇ ಬೇಜವಾಬ್ದಾರಿಯಿಂದ ಲಾಕ್‌ಡೌನ್ ತೆರವು ಮಾಡುತ್ತಾ ತಾನು ಉಂಟುಮಾಡಿದ ಸಮಸ್ಯೆಯನ್ನು ಎದುರಿಸುವ ಹೊರೆಯನ್ನು ರಾಜ್ಯ ಸರ್ಕಾರಗಳಿಗೆ ವರ್ಗಾಯಿಸಿ ಕೈತೊಳೆದುಕೊಂಡಿದೆ ಎಂದು ಆರೋಪಿಸಿದರು.ನಂತರ ವಿಷಯಕ್ಕೆ ಸಂಬಂಧಪಟ್ಟಂತೆ ಪುರಸಭೆ ಮುಖ್ಯಾಧಿಕಾರಿ ಗಂಗಾಧರ್ ಗೆ ಮನವಿಯನ್ನು ಸಲ್ಲಿಸಲಾಯಿತು.ಇನ್ನು ಪ್ರತಿಭಟನೆಯಲ್ಲಿ cpim ಮುಖಂಡ ತಿಮ್ಮೇಗೌಡ ಗೌರಮ್ಮ, ನಂಜಮಣಿ, ಕೃಷ್ಣ, ಹರಿಶ್, ಶಂಕರ್. ಖಾಲಿಕ್ ಭಾಗವಹಿಸಿದರು.

ವರದಿ: ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment