ತಿಪಟೂರು

ವಕೀಲ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಕೈ ಬಿಡುವಂತೆ ಒತ್ತಾಯ..!

Published

on

ತಿಪಟೂರು:ವಕೀಲ ಪ್ರಶಾಂತ್ ಭೂಷಣ್ ಅವರ ಮೇಲೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಕೂಡಲೇ ಪ್ರಕರಣವನ್ನು ಕೈಬಿಡಬೇಕು ಎಂದು ಪ್ರಗತಿಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆ ನಡೆಸಿದವು. ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ವಿವಿಧ ರೈತ ಹಾಗೂ ಪ್ರಗತಿಪರ ಸಂಘಟನೆಗಳಿಂದ ಸಾಂಕೇತಿಕವಾಗಿ ಹಮ್ಮಿ ಕೊಂಡಿದ್ದ ಪ್ರತಿಭಟನೆಯಲ್ಲಿ ರೈತ-ಕಾರ್ಮಿಕ ಸಂಘಟನೆ ರಾಜ್ಯ ಸಮಿತಿ ಸದಸ್ಯ ಎಸ್.ಎನ್.ಸ್ವಾಮಿ ಮಾತನಾಡಿ ನ್ಯಾಯಾಲಯಗಳು ನೀಡಿರುವ ತೀರ್ಪು ಸಮಾಜದ ಮೇಲೆ ಯಾವ ರೀತಿಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂಬುದನ್ನು ಪ್ರಶಾಂತ್ ಭೂಷಣ್ ವಿಮರ್ಶಿಸಿ ಹೇಗೆ ಸಾಮಾಜಿಕ ಅಸ್ತಿರತೆಯನ್ನು ಸೃಷ್ಟಿಸುತ್ತದೆ ಎಂಬುದನ್ನು ತಿಳಿಸಿದ್ದರು. ಇದನ್ನು ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಎಂದು ಪರಿಗಣಿಸಿರುವುದು ದುರಂತವೇ ಸರಿ ಎಂದು ಹೇಳಿದ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಸಂಸ್ಥೆಗಳು, ವ್ಯಕ್ತಿಗಳು ಪ್ರಶ್ನೆಗೆ ಮೀರಿದವರಲ್ಲ, ಎಲ್ಲರನ್ನೂ ಪ್ರಶ್ನಿಸುವ ಅಧಿಕಾರವನ್ನು ಎಲ್ಲರೂ ಹೊಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯುವಾಗಿದ್ದು, ಅದು ನಿಂದನೆ ಆಗುವುದಿಲ್ಲ. ತೀರ್ಪು ಸರಿ ಇಲ್ಲದಿದ್ದರೆ ಅದನ್ನು ಸರಿಪಡಿಸುವಂತಹ ಕೆಲಸ ಆಗಬೇಕಿದೆ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ.ಶಶಿಧರ್, ಹಸಿರು ಸೇನೆಯ ತಿಮ್ಲಾಪುರ ದೇವರಾಜು, ಮನೋಹರ್ ಪಟೇಲ್, ಶ್ರೀಕಾಂತ್ ಮತ್ತಿತರರಿದ್ದರು.

ವರದಿ- ಸಿದ್ದೇಶ್ವರ ಸಿಎನ್ ಎಕ್ಸ್ ಪ್ರೆಸ್ ಟಿವಿ ತಿಪಟೂರು..

Click to comment

Trending

Exit mobile version