ಮಂಡ್ಯ

ಜಾತಿ ಜನಗಣತಿಯ ಸಮೀಕ್ಷೆ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಕೆ.ಪಿ ನಜುಂಡಿ ಒತ್ತಾಯ..!

Published

on

ಮಳವಳ್ಳಿ : ಜಾತಿ ಜನಗಣತಿಯ ಸಮೀಕ್ಷೆಯನ್ನು ಬಹಿರಂಗಪಡಿಸುವಂತೆ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ ನಂಜುಂಡಿ ಸರ್ಕಾರವನ್ನು ಒತ್ತಾಯಿಸಿದರು.ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ವಿಶ್ವಕರ್ಮ ಸಮಾಜ ರಾಜ್ಯದಲ್ಲಿ 45 ಲಕ್ಷ ಮಂದಿ ಇದ್ದರೂ ರಾಜಕೀಯ ಪ್ರಜ್ಞೆ ಇಲ್ಲ ಅದರ ಅರಿವು ಮೂಡಿಸಲು ಜೊತೆಗೆ ಸರ್ಕಾರ ಸವಲತ್ತುಗಳನ್ನು ಪಡೆಯಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯದ 224 ಕ್ಷೇತ್ರದಲ್ಲಿ ಪ್ರವಾಸ ಹಮ್ಮಿಕೊಂಡಿದ್ದೇನೆ ಎಂದರು. ಜೊತೆಗೆ ವಿಶ್ವಕರ್ಮ ಸಮಾಜದ ಅಭಿವೃದ್ಧಿ ನಿಗಮಕ್ಕೆ 300 ಕೋಟಿ ರೂ ಬಿಡುಗಡೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ಹಿಂದುಳಿದ ವರ್ಗದಲ್ಲಿ 103 ಜಾತಿಗಳಿವೆ ಅವರಿಗೆಲ್ಲಾ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು. ಈ ನಿಟ್ಟಿನಲ್ಲಿ ವಿಶ್ವ ಕರ್ಮ ಸಮಾಜವನ್ನು ಸಂಘಟನೆಯ ಜೊತೆಗೆ ರಾಜಕೀಯ ಪ್ರಜ್ಞೆ ಮೂಡಿಸುತ್ತೇನೆ. ಇದಲ್ಲದೆ ಕ್ಷೇತ್ರದಲ್ಲಿ ವಿವಿದ ಸಂಘಸಂಸ್ಥೆಗಳಿಗೆ ನಾಮ ನಿರ್ದೇಶನ ಮಾಡುವಂತೆ ಕ್ಷೇತ್ರದ ಶಾಸಕ ಡಾ.ಕೆ ಅನ್ನದಾನಿರವರನ್ನು ಒತ್ತಾಯಿಸಿದರು. ಸುದ್ದಿಗೋಷ್ಟಿಯಲ್ಲಿ ತಾಲ್ಲೂಕು ವಿಶ್ವಕರ್ಮ ಮಹಾಸಭಾ ಯುವಘಟಕದ ರಾಜ್ಯಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ಸೋಮಶೇಖರ್, ಡಾ.ಯಮದೂರು ಸಿದ್ದರಾಜು, ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು.ಇನ್ನೂ ಇದೇ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಬ್ಬಣಿ ಬಸವರಾಜು ರವರು ಮಾತನಾಡಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಸಂಘಟನೆಯಾಗ ಬೇಕಾಗಿದೆ .ನಿಮ್ಮ ಜೊತೆ ನಮ್ಮ ಸಹಕಾರ ನೀಡುತ್ತೇವೆ ಬಿಜೆಪಿ ಪಕ್ಷದಲ್ಲಿ ಹಿಂದುಳಿದ ವರ್ಗಗಳ ಸಂಘಟನೆ ಮೂಲಕ ಬಿಜೆಪಿಯನ್ನು ಅಧಿಕಾರಿ ತರುವುದಕ್ಕೆ ನಿಮ್ಮ ಸಹಕಾರ ಮುಖ್ಯ ಎಂದರು. ಇನ್ನೂ ವೇಳೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್ ಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಸಿ ನಾಗೇಗೌಡ, ಸೇರಿದಂತೆ ಮತ್ತಿತ್ತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು..

ವರದಿ : ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version