ಕೆಜಿಎಫ್‌ನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ..ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯ..!

ಕೋಲಾರ :ಹಳೇ ವೈಷಮ್ಯ ಹಿನ್ನೆಲೆ ಇಬ್ಬರ ನಡುವೆ ಗಲಾಟೆ ನಡೆದು, ಮಾರಣಾಂತಿಕ ಹಲ್ಲೆಯಾಗಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ನಡೆದಿದೆ. ನಗರದ ಸೋರ್ಕಾಪೆಟ್ ವಾರ್ಡ್‌ನಲ್ಲಿ ಘಟನೆ ನಡೆದಿದೆ. ಜಾನ್ಸನ್ ಹಾಗೂ ಡೆಪೋ ಮಸ್ಕಾನ್ ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದ್ದು ಕೋಪ ತೀವ್ರವಿಕೋಪಕ್ಕೆ ಹೊಗುತ್ತಿದ್ದಂತೆ ಮಸ್ಕಾನ್ ಎಂಬಾತ ಸ್ಟಾಲಿನ್ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸ್ಟಾಲಿನ್ ನನ್ನು ಹತ್ತಿರದ ಕೋಲಾರ ಜಿಲ್ಲಾಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಗಲಾಟೆಯಲ್ಲಿ ಭಾಗಿಯಾಗಿದ್ದವರನ್ನ ಪತ್ತೆ ಹಚ್ಚುವ ಕಾರ್ಯ ಆರಂಭವಾಗಿದೆ.

ವರದಿ-ವಿ.ರಾಮಕೃಷ್ಣ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment