ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

ಹುಬ್ಬಳ್ಳಿ: ಸಾಲ ಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಘಟಗಿ ತಾಲ್ಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಬಸಪ್ಪ ಮುದಕಪ್ಪ (ಮರಬಸಪ್ಪ ) ಆತ್ಮಹತ್ಯೆ ಮಾಡಿಕೊಂಡ ರೈತ.ಇತ ಸುಮಾರು ಎರಡು ಎಕರೆ ಜಮೀನು ಹೊಂದಿದ್ದು, ಮೂರು ವರ್ಷಗಳ ಹಿಂದೆ ಕೆವಿಜಿ ಬ್ಯಾಂಕ್ ನಲ್ಲಿ ಒಂದುವರೆ ಲಕ್ಷ ರೂಪಾಯಿ ಬೆಳೆ ಸಾಲಮಾಡಿದ್ದ. ಆದ್ರೆ ಮಾಡಿದ ಸಾಲ ತೀರಿಸಲಾಗದೆ ಮನನೊಂದು ತನ್ನ ಹೊಲದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ-ರಾಜು ಮುದುಗಲ್ ಎಕ್ಸ್ ಪ್ರೆಸ್ ಟಿವಿ

Please follow and like us:

Related posts

Leave a Comment