ಬೆಳಗಾವಿಯಲ್ಲಿ ರಾಯಣ್ಣನ ಪುತ್ಹಳಿಕೆ ಪ್ರತಿಷ್ಠಾಪನೆ ವಿವಾದಕ್ಕೆ ತೆರೆ..!

ಬೆಳಗಾವಿ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿವಾದಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಎಡಿಜಿಪಿ ಅಮರಕುಮಾರ್ ಪಾಂಡೆ ಅವರು ಕನ್ನಡಿಗ- ಮರಾಠಿಗ ಭಾಷಿಕ ಮುಖಂಡರ ಜೊತೆ ಸಂಧಾನ ಸಭೆ ನಡೆಸಿದ್ದು,ಸಭೆಯು ಸಫಲವಾಗಿದೆ. ಪೀರನವಾಡಿಯ ಲಕ್ಷ್ಮೀ ಮಹಲ್ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ಕನ್ನಡ ಮತ್ತು ಮರಾಠಿ ಭಾಷಿಕರ ನಾಯಕರ ಸಭೆಯಲ್ಲಿ ಸೌಹಾರ್ದಯುತ ಸಲಹೆಗಳು ಪ್ರಸ್ತಾಪವಾಗಿ ವಿವಾದಕ್ಕೆ ಬಹುತೇಕ ತೆರೆಬಿದ್ದಿದೆ. ರಾಯಣ್ಣ ಅಭಿಮಾನಿಗಳು ಪ್ರತಿಷ್ಠಾಪಿಸಿದ ಸ್ಥಳದಲ್ಲೇ ರಾಯಣ್ಣ ಪ್ರತಿಮೆ ಇರಲು ಮರಾಠಿ ಭಾಷಿಕರು ಒಪ್ಪಿಗೆ ಕೊಟ್ಟಿದ್ದಾರೆ. ಮೂರ್ತಿ ಪ್ರತಿಷ್ಠಾಪಿಸಿದ ವೃತ್ತಕ್ಕೆ ‘ಶಿವಾಜಿ ವೃತ್ತ’ ಎಂದು ನಾಮಕರಣ ಮಾಡಲು ಕನ್ನಡಪರ ಮುಖಂಡರು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಡಿಸಿ ಎಂ.ಜಿ.ಹಿರೇಮಠ, ಎಡಿಜಿಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೀರನವಾಡಿ ವಿವಾದಕ್ಕೆ ಸೌಹಾರ್ದತೆಯ ತೆರೆ ಬಿದ್ದಿದೆ…

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.

Please follow and like us:

Related posts

Leave a Comment