ಗಂಟೆ ಭಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದ ಪರಿಣಾಮವೇ ಇದು : ದಿನೇಶ್ ಗುಂಡೂರಾವ್..!

ಬೆಂಗಳೂರು : ದೇಶದಾದ್ಯಂತ ಕೊರೊನಾ ಸೋಂಕು ದಿನದಿಂದ ದಿನ ಹೆಚ್ಚಾಗುತ್ತಿದೆ. ವಿಚಾರಕ್ಕೆ ಇದೀಗ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿದ ಪರಿಣಾಮ ಕೊರೊನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಬಿಜೆಪಿ ಘೋಷಿತ ‘ವಿಶ್ವಗುರು’ಗಳ ಬತ್ತಳಿಕೆಯಲ್ಲಿ ಕೊರೊನಾ ಸದ್ದಡಗಿಸಲು ಇನ್ಯಾವ ಅಸ್ತ್ರಗಳಿದ್ದಾವೋ?” ಎಂದು ಕೇಂದ್ರ ಸರ್ಕಾರಕ್ಕೆ ವಿರುದ್ಧ ವ್ಯಂಗ್ಯವಾಡಿದ್ದಾರೆ. ಕೆಲುವು ದಿನಗಳಲ್ಲಿ ವಿಶ್ವದಲ್ಲೇ 1ನೇ ಸ್ಥಾನಕ್ಕೆ ಭಾರತ ಏರುವುದು ನಿಸ್ಸಂದೇಹ. ಜನಸಂಖ್ಯೆ ಹೆಚ್ಚಿರುವುದರಿಂದ ಇದು ಆಶ್ಚರ್ಯಕರ ಸಂಗತಿ ಅಲ್ಲ. ಆದರೆ ನೆರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ವೈಫಲ್ಯ ಸ್ಪಷ್ಟವಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment