ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..

ನವದೆಹಲಿ: ಭಾರತದ 13ನೇ ರಾಷ್ಟ್ರಪತಿ ಮತ್ತು ವಿತ್ತ ಮಂತ್ರಿಯಾಗಿದ್ದ ಪ್ರಣಬ್ ಮುಖರ್ಜಿ ಇಂದು ಸಂಜೆ 5.45ರ ಹೊತ್ತಿಗೆ ಕೊನೆಯುಸಿರೆಳೆದರು ಎಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫರೆಲ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಹಾಗೂ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿಯ ಆರ್ ಆರ್ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ರಾತ್ರಿ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೋಮವಾರ ರಾತ್ರಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ಅರೋಗ್ಯ ಬಿಗಡಾಯಿಸಿದ್ದರಿಂದ ಅವರನ್ನು ಕೃತಕ ಉಸಿರಾಟದ ವ್ಯವಸ್ಥೆಯಲ್ಲಿ ಇಡಲಾಗಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಪ್ರಣಬ್ ಅವರು ವೆಂಟಿಲೇಟರ್ ಸಹಾಯದಲ್ಲಿಯೇ ಇದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸೇನಾ ಆಸ್ಪತ್ರೆಯ ವ್ಯವಸ್ಥೆಯಲ್ಲಿ ಇಡಲಾಗಿತ್ತು. ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಪ್ರಣಬ್ ಅವರು ವೆಂಟಿಲೇಟರ್ ಸಹಾಯದಲ್ಲಿಯೇ ಇದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಸೇನಾ ಆಸ್ಪತ್ರೆಯ ಮಂಗಳವಾರ ಸಂಜೆ ಹೆಲ್ ಬುಲೆಟಿನ್ ತಿಳಿಸಿತ್ತು. ಪ್ರಣಬ್ ಅವರು 1935ರ ಡಿಸೆಂಬರ್ 11 ರಂದು ಪಶ್ಚಿಮ ಬಂಗಾಲದ ಬಿರ್ಚ್ಚು೦ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದ ಅವರು, ಮುತ್ಸದ್ಧಿ ರಾಜಕಾರಣಿಯೆನಿಸಿದ್ದರು. ಲೋಕಸಭೆಯ ನಾಯಕ, ಕಾಂಗ್ರೆಸ್ ಕಾರ್ಯ ಸಮಿತಿಯ ಸದಸ್ಯ ಕೂಡ (ಸಿ.ಡಬ್ಲ್ಯೂ.ಸಿ) ಆಗಿದ್ದರು. ಕೋಲ್ಕತ ವಿಶ್ವವಿದ್ಯಾಲಯದಿಂದ ನ್ಯಾಯಶಾಸನದಲ್ಲಿ ಮಾಸ್ಟರ್ಸ್ ಪದವಿ ಪಡೆದಿದ್ದ ಅವರು ನ್ಯಾಯವಾದಿಯಾಗಿ, ಉಪನ್ಯಾಸಕರಾಗಿದ್ದರು. ಗೌರವಾರ್ಥ ಡಿ.ಲಿಟ್ ಪಡೆದಿದ್ದರು. ಪ್ರಣಬ್ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೊವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೊದಲಾದವರು ಕಂಬನಿ ಮಿಡಿದಿದ್ದಾರೆ

ವರದಿ-ನ್ಯೂಸ್ ಡೆಸ್ಕ್ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment