ಭಾರತದಲ್ಲಿ 37 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ..!

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 37 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 78357 ಜನರಿಗೆ ಮಹಾಮಾರಿ ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.ನಿನ್ನೇ ಬೆಳಗ್ಗೆ 9 ಗಂಟೆಯಿಂದ ಇಂದು ಬೆಳಗ್ಗೆ 9 ಗಂಟೆವರೆಗೂ ಕೊರೊನಾ ವೈರಸ್ ಸೋಂಕಿನಿಂದಾಗಿ 1045 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಇದುವರೆಗೂ ಬಲಿಯಾದವರ ಸಂಖ್ಯೆ 66333ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3769524ಕ್ಕೆ ಏರಿಕೆಯಾಗಿದ್ದು, ಈ ಪೈಕಿ 2901909 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಬಾಕಿ 801282 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment