Uncategorized

ರಂಭಾಪುರಿ ಶ್ರೀಗಳಿಗೂ ಅಂಟಿದ ಕೊರೊನಾ ಸೋಂಕು..!

Published

on

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ಜಗದ್ಗುರು ರಂಭಾಪುರಿ ಶ್ರೀಗಳಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ. ನಿನ್ನೆ ರಾತ್ರಿಯಿಂದ ಶ್ರೀಗಳಿಗೆ ಜ್ವರ ಕಾಣಿಸಿಕೊಂಡಿದೆ.ಹೀಗಾಗಿ ಬೆಂಗಳೂರಿಗೆ ಬಂದಿದ್ದ ಶ್ರೀಗಳು ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬಂದ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಸದ್ಯ ಶ್ರೀಗಳನ್ನು ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ನೀಡಿದ್ದು,ಅದರಂತೆ ಖಾಸಗಿ ಆಸ್ಪತ್ರೆಗೆ ಶ್ರೀಗಳನ್ನ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು.

Click to comment

Trending

Exit mobile version