ಬೆಂಗಳೂರು

ಕೋವಿಡ್ ನಿಂದಾಗಿ ಮಾಜಿ ಜೆಡಿಎಸ್ ಶಾಸಕ ನಿಧನ..!

Published

on

ಬೆಂಗಳೂರು: ಕೊರೊನಾ ವೈರಸ್ ರಾಜ್ಯದಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದೆ. ಭದ್ರಾವತಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರು ಕೋವಿಡ್-19 ಸೋಂಕು ತಗುಲಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಜೆಡಿಎಸ್ ಮಾಜಿ ಶಾಸಕ ಅಪ್ಪಾಜಿಗೌಡರ ನಿಧನಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಎಂ.ಜೆ. ಅಪ್ಪಾಜಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತೀರಾ ದು:ಖವಾಯಿತು. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಚ್‌ಡಿಕೆ ಸಂತಾಪ ಸೂಚಿಸಿದ್ದಾರೆ.

ವರದಿ- ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version