ರಾಜಕೀಯ

ಪ್ರಧಾನಿ ನರೇಂದ್ರ ಮೋದಿಯವರ ಪರ್ಸನಲ್ ವೆಬ್ಸೈಟ್ನ ಟ್ವಿಟರ್ ಅಕೌಂಟ್ ಹ್ಯಾಕ್..!

Published

on

ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ಅವರ ಪರ್ಸನಲ್ ವೆಬ್ಸೈಟ್ನ ಟ್ವಿಟರ್ ಅಕೌಂಟ್ ಹ್ಯಾಕ್ ಮಾಡಲಾಗಿದೆ. ಈ ಬಗ್ಗೆ ನಿನ್ನೆ ರಾತ್ರಿಯೇ ಹ್ಯಾಕರ್ಸ್ ಟ್ವೀಟ್ ಮಾಡಿದ್ದಾರೆ. narendramodi.in ಟ್ವಿಟ್ಟರ್ ಅಕೌಂಟ್ನಲ್ಲಿ ವೆಬ್ಸೈಟ್ ಗೆ ಸಂಬಂಧಿಸಿದ ಮಾಹಿತಿ ಮತ್ತು ನಮೋ ಆ್ಯಪ್ ಗೆ ಕುರಿತ ಅಪಡೇಟ್ ನೀಡಲಾಗುತ್ತಿತ್ತು. ಅಕೌಂಟ್ ಹ್ಯಾಕ್ ಕುರಿತು ಪ್ರತಿಕ್ರಿಯಿಸಿರುವ ಟ್ವಟ್ಟರ್, ನರೇಂದ್ರ ಮೋದಿಯವರ ವೆಬ್ಸೈಟ್ ಖಾತೆಯಲ್ಲಿ ಉಂಟಾದ ಸಮಸ್ಯೆ ಗಮನಕ್ಕೆ ಬಂದಿದೆ. ಸಮಸ್ಯೆ ಬಗೆಹರಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ. ರಾತ್ರಿ ಸುಮಾರು 3 ಗಂಟೆಗೆ ನರೇಂದ್ರ ಮೋದಿಯವರ ಖಾತೆಯಿಂದ ಒಂದು ಟ್ವೀಟ್ ಮಾಡಲಾಗಿತ್ತು. ಈ ಖಾತೆಯನ್ನ ಜಾನ್ ವಿಕ್ (hckindia@tutanota.com) ಮೂಲಕ ಹ್ಯಾಕ್ ಮಾಡಲಾಗಿದೆ.ನಾವು ಪೇಟಿಎಂ ಮಾಲ್ ಹ್ಯಾಕ್ ಮಾಡಿಲ್ಲ ಎಂದಿದ್ದಾರೆ. ಟ್ವೀಟ್ ನಲ್ಲಿ ಕ್ರಿಪ್ಟೋ ಕರೆನ್ಸಿಯಲ್ಲಿ ನ್ಯಾಶನಲ್ ರಿಲೀಫ್ ಫಂಡ್ಗೆ ಹಣ ಹಾಕುವಂತೆ ಹೇಳಲಾಗಿದೆ. ಆದ್ರೆ ಈ ಟ್ವೀಟ್ ಕೆಲವೇ ಕ್ಷಣಗಳಲ್ಲಿ ಡಿಲೀಟ್ ಮಾಡಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version