ಸಿಸಿಬಿ ನೋಟಿಸ್ ಬೆನ್ನಲ್ಲೇ ಎಸ್ಕೇಪ್ ಆದ್ರಾ ರಾಗಿಣಿ ದ್ವಿವೇದಿ?

ಬೆಂಗಳೂರು :ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದೀಗ ಸಿಸಿಬಿ ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಅನ್ನೋ ಪ್ರಶ್ನೆ ಇದೀಗ ಉದ್ಭವವಾಗಿದೆ. ನಿನ್ನೆ ರವಿಶಂಕರ್ ಎಂಬುವನನ್ನ ಸಿಸಿಬಿ ಅಧಿಕಾರಿಗಳು ಬಂಧಿಸಿ, ಡ್ರಗ್ಸ್ ಲಿಂಕ್ ಬಗ್ಗೆ ವಿಚಾರಣೆ ನಡೆಸಿದ್ದಾರೆ. ರವಿಶಂಕರ್ ಹೇಳಿಕೆಯನ್ನ ಆಧರಿಸಿ, ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಅಧಿಕಾರಿಗಳು ನಿನ್ನೆ ಸಂಜೆ ನೋಟಿಸ್ ಜಾರಿ ಮಾಡಿದ್ದಾರೆ. ಆದ್ರೆ ನಿನ್ನೆ ರಾತ್ರಿ 11 ಗಂಟೆ ನಂತರ ಮನೆಯಿಂದ ಹೊರಗಡೆ ಹೋಗಿದ್ದಾರೆ ಅಂತ ಮನೆಯ ಸೆಕ್ಯೂರಿಟಿ ಗಾರ್ಡ್ ಹೇಳುತ್ತಿದ್ದಾರೆ. ಈ ಹಿನ್ನೆಲೆ ರಾಗಿಣಿ ಸಿಸಿಬಿಗೆ ಹೆದರಿ ಮನೆಯಿಂದ ಪರಾರಿಯಾದ್ರಾ ? ಅಥವಾ ಮನೆಯಲ್ಲೇ ಇದ್ದು ಸೆಕ್ಯೂರಿಟಿ ಗಾರ್ಡ್ ಬಳಿ ಸುಳ್ಳು ಹೇಳಿಸ್ತಾಯಿದ್ದಾರಾ ಅನ್ನುವ ಪ್ರಶ್ನೆ ಎದುರಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment