ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಬಾರಿ – ಹವಮಾನ ಇಲಾಖೆ ಮುನ್ಸೂಚನೆ..!

ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ,ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಸಾಕಷ್ಟು ಕಡೆ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ,ಕೊಡಗು,ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ಚಾಮರಾಜನಗರ,ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ,ಮಂಡ್ಯ, ಮೈಸೂರು, ರಾಮನಗರ,ತುಮಕೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment