ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಪಾಸಿಟಿವ್..!

ಬೆಂಗಳೂರು :ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಇದೀಗ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಈ ಬಗ್ಗೆ ಸ್ವತಃ ಶರ್ಮಿಳಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು,ನನಗೆ ಹಾಗೂ ನನ್ನ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದೆ. ಸಣ್ಣದಾಗಿ ರೋಗಲಕ್ಷಣ ಇದೆ. ಹೀಗಾಗಿ ನಾವು ಮನೆಯಲ್ಲೇ ಹೋಂ ಐಸೊಲೇಷನ್‌ನಲ್ಲಿರಲು ನಿರ್ಧರಿಸಿದ್ದೇವೆ. ನಾನು ಕ್ವಾರಂಟೈನ್ಗೆ ಒಳಗಾಗಿದ್ದು,ವೈದ್ಯರ ಸಲಹೆಯಂತೆ ಔಷಧಿಗಳನ್ನ ತೆಗೆದುಕೊಳ್ತಿದ್ದೀನಿ ಎಂದು ಶರ್ಮಿಳಾ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ವರದಿ-ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment