ಮಂಡ್ಯ

ಮಳವಳ್ಳಿಯ ನೂತನ ಕ್ಷೇತ್ರದ ಶಿಕ್ಷಣಾಧಿಕಾರಿಯಾಗಿ ಚಿಕ್ಕಸ್ವಾಮಿ ಅಧಿಕಾರ ಸ್ವೀಕಾರ..!

Published

on

ಮಳವಳ್ಳಿ: ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಟಿ ಶಿವಲಿಂಗಯ್ಯ ದಿಡೀರ್ ವರ್ಗಾವಣೆಯಾದ ಹಿನ್ನಲೆಯಲ್ಲಿ ಮಳವಳ್ಳಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಚಿಕ್ಕಸ್ವಾಮಿ ಇಂದು ಅಧಿಕಾರ ಸ್ವೀಕರಿಸಿದರು.ಚಿಕ್ಕಸ್ವಾಮಿರವರು ಈ ಹಿಂದೆ ಪಿರಿಯಾಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದರು ಎನ್ನಲಾಗಿದೆ. ಮಳವಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ನೇತೃತ್ವದಲ್ಲಿ ತಾಲ್ಲೂಕು ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿರವರನ್ನು ಆತ್ಮೀಯ ಸ್ವಾಗತಿಸಿದರು. ಇದಲ್ಲದೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಹಾಗೂ ಪದಾಧಿಕಾರಿಗಳು,ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು, ಕಚೇರಿಯ ಸಿಬ್ಬಂದಿಗಳು, ಅಭಿನಂದಿಸಿದರು. ಇನ್ನೂ ನೂತನ ಕ್ಷೇತ್ರಶಿಕ್ಷಣಾಧಿಕಾರಿ ಚಿಕ್ಕಸ್ವಾಮಿರವರು ಅಭಿನಂದನೆ ಸ್ವೀಕರಿಸಿದ ಬಳಿಕ ವಾಹಿನಿಯೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಶಿಕ್ಷಣವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ.ಇದಕ್ಕೂ ಮುನ್ನ ತಾಲ್ಲೂಕಿನ ಬಿಆರ್ ಸಿ, ಸಿಆರ್ ಸಿ, ಹಾಗೂ ವಿವಿದ ಸಂಘಗಳ ಅಧ್ಯಕ್ಷರುಗಳ ಜೊತೆ ಸಭೆ ಕರೆದು ಚರ್ಚೆಮಾಡುತ್ತೇನೆ ಎಂದರು.ಇನ್ನೂ ಕೋವಿಡ್ 19 ನಿಂದ ಶಾಲಾಗಳ ಆರಂಭ ವಿಳಂಬವಾಗಿತ್ತಿದೆ.ಈಗಾಗಲೇ ನಮ್ಮ ಶಿಕ್ಷಕರು ಮನೆಮನೆಗೂ ತೆರಳಿ ಮಕ್ಕಳಿಗೆ ಪಾಠ ಹೇಳಿಕೊಡುತ್ತಿದ್ದಾರೆ, ಇನ್ನೂ ಖಾಸಗಿ ಶಾಲೆಗಳು ಪೋಷಕರನ್ನು ಹಣಕಟ್ಟಲು ಒತ್ತಡ ತರುತ್ತಿರುವ ಕೇಳಿದ ಪ್ರಶ್ನೆಗೆ ಉತ್ತರಿಸಿದ ನೂತನ ಬಿಇಓ ಚಿಕ್ಕಸ್ವಾಮಿರವರು ಈಗಾಗಲೇ ನಾಲ್ಕು ಐದು ಬಾರಿ ನೋಟಿಸ್ ನೀಡಲಾಗಿದ್ದು, ಒಂದು ವೇಳೆ ಪೋಷಕರಿಗೆ ಒತ್ತಡ ತಂದರೆ ಅಂತಹ ಖಾಸಗಿ ಶಾಲೆ ಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮಾನ್ವಯಾಧಿಕಾರಿ ಯೋಗೇಶ್,ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಧು,ನಿವೃತ್ತ ಮುಖ್ಯ ಶಿಕ್ಷಕರು,ಶಿಕ್ಷಕರು ಸಹ ಅಭಿನಂದಿಸಿದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version