ಶಾಸಕ ವೆಂಕಟರಾವ್ ನಾಡಗೌಡ ಸ್ವಗ್ರಾಮದಲ್ಲೇ ವೈಧ್ಯರಿಲ್ಲದೇ ರೋಗಿಗಳ ಪರದಾಟ..!

ಸಿಂಧನೂರು:ಸಿಂಧನೂರು ತಾಲ್ಲೂಕಿನ ಜವಳಗೇರಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಳೆದ ಸುಮಾರು 25 ದಿನಗಳಿಂದ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಆರೋಗ್ಯ ಕೇಂದ್ರಕ್ಕೆ ಕೇವಲ ಜವಳಗೇರಾ ಗ್ರಾಮವಲ್ಲದೆ ಅಕ್ಕಪಕ್ಕದ ಗ್ರಾಮದ ಜನರು ಸಹ ವೈದ್ಯಕೀಯ ಸೇವೆಯನ್ನು ಪಡೆಯಲು ಇದೇ ಆರೋಗ್ಯ ಕೇಂದ್ರವನ್ನು ಅವಲಂಬಿಸಿದ್ದಾರೆ.ಆದರೆ ಕಳೆದ 25 ದಿನಗಳಿಂದ ಯಾವ ಒಬ್ಬ ವೈದ್ಯರಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದರೂ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಆರೋಗ್ಯ ಆಡಳಿತ ಅಧಿಕಾರಿ ಡಾ! ನಾಗರಾಜ್ ಪಾಟೀಲ್ ಈ ಆರೋಗ್ಯ ಕೇಂದ್ರಕ್ಕೆ ಒಬ್ಬ ವೈದ್ಯರನ್ನು ನಿಯೋಜನೆ ಮಾಡದೆ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ದಿನನಿತ್ಯ ನೂರಾರು ಜನರು ವೈದ್ಯಕೀಯ ಸೇವೆ ಪಡೆಯಲು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ತೆರಳುವ ಸ್ಥಿತಿ ನಿರ್ಮಾಣವಾಗಿದೆ. ಕೊರೋನ ಮಹಾಮಾರಿಯ ಸಮಯದಲ್ಲಿ ಪ್ರಮುಖವಾಗಿ ವೈದಿಕ ಸೇವೆಯು ಅತ್ಯವಶ್ಯಕವಾಗಿದೆ,ತುರ್ತು ಆರೋಗ್ಯ ಸೇವೆ ಪಡೆಯಲು ತಾಲ್ಲೂಕು ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ರೋಗಿಗಳು ತೆರಳುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸವೆ ಸರಿ. ಶಾಸಕ ವೆಂಕಟರಾವ್ ನಾಡಗೌಡ ಸ್ವಗ್ರಾಮ ಇದಾಗಿದ್ದು,ಇಲ್ಲಿ ವೈದ್ಯರನ್ನು ನಿಯೋಜನೆ ಮಾಡಬೇಕಾದ ಶಾಸಕ ವೆಂಕಟರಾವ್ ನಾಡಗೌಡ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಗ್ರಾಮಸ್ಥರ ಆರೋಪವಾಗಿದೆ.

ವರದಿ-ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment