ರಸ್ತೆ ಕಾಮಗಾರಿಗಳಿಗೆ ಶಾಸಕ ದರ್ಶನಾಪುರ ಚಾಲನೆ…!

ಶಹಾಪುರ: ಶಹಾಪುರ ತಾಲ್ಲೂಕಿನ ಹಾರಣಗೇರಾ ಗ್ರಾಮದ ಮೂಲಕ ಗೋಗಿ ಮತ್ತು ಮುದ್ರಿಕಿ ಗ್ರಾಮಗಳಿಗೆ ಸಂಪರ್ಕ ಕೂಡುವ ರಸ್ತೆ ಕಾಮಗಾರಿಯನ್ನು ಶಹಾಪುರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಚಾಲನೆ ನೀಡಿದರು. 2019 – 20 ನೇ ಸಾಲಿನ ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿಯಲ್ಲಿ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ 14 ಕಿಲೋಮೀಟರ್ ವರೆಗೆ ರಸ್ತೆ ಕಾಮಗಾರಿಯನ್ನು ವೀಕ್ಷಿಸಿ ಕಾಮಗಾರಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವಂತೆ ಹಾಗೂ ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ಭಾಗದ ಸುಮಾರು 25 ಕ್ಕೂ ಹೆಚ್ಚು ಹಳ್ಳಿಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಿದ್ದು ವಾಹನ ಸವಾರರಿಗೆ ತುಂಬಾ ಅನುಕೂಲವಾಗಲಿದೆ ಎಂದು ಹೇಳಿದರು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ಸಂದರ್ಭದಲ್ಲಿ ಇಲಾಖೆ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಇತರರು ಉಪಸ್ಥಿತರಿದ್ದರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟವಿ ಶಹಾಪುರ

Please follow and like us:

Related posts

Leave a Comment