ಬೆಳ್ಳಂ ಬೆಳಗ್ಗೆ ರಾಗಿಣಿ ದ್ವಿವೇದಿಗೆ ಸಿಸಿಬಿ ಶಾಕ್..!

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಮನೆಯ ಮೇಲೆ ಬೆಳ್ಳಂ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಮ್ಮ ಆಪ್ತ ಗೆಳೆಯನ ಬಂಧನದ ಬೆನ್ನಲ್ಲೇ ರಾಗಿಣಿಗೆ ಬಂಧನ ಭೀತಿ ಎದುರಾಗಿದೆ.ಡ್ರಗ್ಸ್ ಪ್ರಕರಣ ಸಂಬಂಧ ರಾಗಿಣಿ ಸಿಸಿಬಿ ವಿಚಾರಣೆಗೆ ವೈಯಕ್ತಿಕ ಕಾರಣ ನೀಡಿ ಗೈರಾಗಿದ್ದರು, ಸೋಮವಾರ ವಿಚಾರಣೆಗೆ ಬರಲು ಬದ್ಧರಾಗಿರುವುದಾಗಿ ಟ್ವೀಟ್ ಮಾಡಿದ್ದರು.ಇಂದು ಸರ್ಚ್ ವಾರೆಂಟ್ ಪಡೆದು ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ ಮೇಲೆ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಯ ಇಡೀ ಮನೆಯನ್ನು ತಪಾಸಣೆ ನಡೆಸುತ್ತಿದ್ದಾರೆ.ಇದೇ ವೇಳೆ ರಾಗಿಣಿಗೆ ಸೇರಿದ ಬರೋಬ್ಬರಿ ನಾಲ್ಕು ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಟಿ ರಾಗಿಣಿ ಮನೆ ಮೇಲೆ ರೈಡ್ ಮಾಡಿರೋದಾಗಿ ಅಪರಾಧ ವಿಭಾಗದ ಜಂಟಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ರಾಗಿಣಿ ಆಪ್ತ ರವಿಶಂಕರ್ ನನ್ನ ಸಿಸಿಬಿ ಬಂಧಿಸಿದ್ದರು.ಆತ ನೀಡಿದ ಮಾಹಿತಿ ಆಧಾರದ ಮೇರೆಗೆ ಬೆಳ್ಳಂ ಬೆಳಗ್ಗೆ ರಾಗಿಣಿಗೆ ಮನೆಗೆ ಸಿಸಿಬಿ ಅಧಿಕಾರಿಗಳು ಆಗಮಿಸಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment