ಹಳೇ ಮೊಬೈಲ್ ಫೋನಿನ ಡೇಟಾ ಡೀಲಿಟ್ ಮಾಡಿ ಹೊಸ ಫೋನ್ ಖರೀದಿಸಿದ ರಾಗಿಣಿ..!

ಬೆಂಗಳೂರು: ಡ್ರಗ್ಸ್ ವಿಷಯಕ್ಕೆ ಸಂಬಂಧಪಟ್ಟಂತೆ ರಾಗಿಣಿ ಆಪ್ತ ರವಿಶಂಕರ್ ನನ್ನು ಸಿಸಿಬಿ ಪೋಲಿಸರು ಬಂಧಿಸಿದ್ದರು ಆತನ ಹೇಳಿಜಕೆಯ ಆಧಾರದ ಮೇಲೆ ನಟಿ ರಾಗಿಣಿಯನ್ನು ವಿಚಾರಣೆಗೆ ಬರುವುದಕ್ಕೆ ನೋಟಿಸ್ ಕೂಡ ನೀಡಲಾಗಿತ್ತು ,ಆದ್ರೆ ನಟಿ ರಾಗಿಣಿ ವಿಚಾರಣೆಗೆ ಬರುವುದಕ್ಕೆ ಹಿಂದೆಟ್ಟು ಹಾಕಿದ್ದು ಸೋಮವಾರ ವಿಚಾರಣೆಗೆ ಬರುವುದಾಗಿ ಟ್ವೀಟ್ ಮಾಡಿದ್ದರು.ಆದ್ರೆ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ನಟಿ ರಾಗಿಣಿಗೆ ಶಾಕ್ ನೀಡಿದ್ದಾರೆ. ಬೆಳಗ್ಗೆ 6.30ಕ್ಕೆ ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ಯಲಹಂಕದಲ್ಲಿರುವ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.2 ಕಾರಿನಲ್ಲಿ ಬಂದಿಳಿದ ಸಿಸಿಬಿ ಅಧಿಕಾರಿಗಳು ರಾಗಿಣಿ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ರಾಗಿಣಿಯ ಹಲವು ನಡೆ ಸಿಸಿಬಿ ಅಧಿಕಾರಿಗಳಿಗೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.ಸಾಕ್ಷ್ಯ ನಾಶಕ್ಕೆ ರಾಗಿಣಿ ಮಾಸ್ಟರ್ ಪ್ಲಾನ್ ಮಾಡಿದ್ದಾರಾ ಎನ್ನುವ ಶಂಕೆ ವ್ಯಕ್ತವಾಗಿದ್ದು,ಅನುಮಾನಕ್ಕೆ ಕಾರಣವಾಗಿದೆ. ನಟಿ ತನ್ನ ವಾಟ್ಸಪ್ ಅನ್ನು ಡಿಲೀಟ್ ಮಾಡಿರುವುದು.ವಾಟ್ಸಪ್ ಡಿಲೀಟ್ ಮಾಡಿ ಹೊಸ ಮೊಬೈಲ್ ಖರೀದಿಸಿ ವಾಟ್ಸಪ್ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ.ವಾಟ್ಸಪ್ ಚಾಟ್ ಸಿಗದ್ದಂತೆ ಮಾಡಿದ್ದಾರೆ.ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡುತ್ತಿದ್ದಂತೆ ರಾಗಿಣಿ ಎಸ್ಕೇಪ್ ಆಗಲು ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಸಿಸಿಬಿ ವಿಚಾರಣೆಗೆ ಹಾಜರಾಗಲು ಹಿಂದೇಟು ಹಾಕಿದ ರಾಗಿಣಿ ಹಲವು ಕಾರಣಗಳನ್ನು ನೀಡಿ ತಪ್ಪಿಸಿಕೊಂಡಿದ್ದಾರೆ.ಆದರೆ ರಾಗಿಣಿ ನಡೆ ಅನುಮಾನ ಮೂಡಿಸಿದ ಹಿನ್ನಲೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸರ್ಚ್ ವಾರೆಂಟ್ ಪಡೆದು ದಿಢೀರ್ ದಾಳಿ ನಡೆಸಿದ್ದಾರೆ.ದಾಳಿ ಬಳಿಕ ಅಧಿಕಾರಿಗಳು ರಾಗಿಣಿಗೆ ಸೇರಿದ 4 ಮೊಬೈಲ್, 2 ಲ್ಯಾಪ್ ಟಾಪ್ ಅನ್ನು ಸೀಜ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment