ಹಿಂದುಳಿದ ಜಾತಿಯ ಸಂಘಟಿತರಾದಾಗ ಮಾತ್ರ ಸರ್ಕಾರದ ಸೌಲಭ್ಯ ಅನುಭವಿಸಲು ಸಾಧ್ಯ..ಮಾಜಿ ಸಂಸದ ಕೆ.ವಿರೂಪಾಕ್ಷ..!

ಸಿಂಧನೂರು : ಹಿಂದುಳಿದ ಜಾತಿಗಳು ಸಂಘಟಿತರಾದಾಗ ಮಾತ್ರ ಸರ್ಕಾರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಪಡೆಯಲು ಮಾತ್ರ ಸಾಧ್ಯ ಎಂದು ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಹೇಳಿದರು. ನಗರದ ತಮ್ಮ ನಿವಾಸದಲ್ಲಿ ಮಸ್ಕಿ ತಾಲ್ಲೂಕಿನ ನೂತನ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಅವರಿಗೆ ಸನ್ಮಾನಿಸಲಾಯಿತು. ಈ ಸನ್ಮಾನವನ್ನು ಸ್ವೀಕರಿಸಿ ನಂತರ ಮಾತನಾಡಿದ ಅವರು ಜಿಲ್ಲೆಯಾದ್ಯಂತ ನೂತನವಾಗಿ ಹಿಂದುಳಿದ ವರ್ಗಗಳ ಒಕ್ಕೂಟ ರಚನೆ ಮಾಡುವ ದೃಷ್ಟಿಯಿಂದ ಈಗಾಗಲೇ ಸಿಂಧನೂರು ತಾಲ್ಲೂಕಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟ ರಚನೆ ಮಾಡಿದ್ದು. ಅದೇ ಪ್ರಕಾರ ಮಸ್ಕಿ ತಾಲ್ಲೂಕಿನಲ್ಲಿ ಸಹ ಹಿಂದುಳಿದ ಜಾತಿಗಳ ಒಕ್ಕೂಟ ರಚನೆ ಮಾಡಿರುವುದು ಸ್ವಾಗತಾರ್ಹ. ಹಿಂದುಳಿದ ಜಾತಿಗಳ ಒಕ್ಕೂಟವು ಸಂಘಟಿತರಾದಾಗ ಮಾತ್ರ ಈ ಪ್ರಜಾಪ್ರಭುತ್ವದಲ್ಲಿ ರಾಜಕೀಯ ಶೈಕ್ಷಣಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಸರ್ಕಾರದ ಪ್ರತಿಯೊಂದು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ನಂತರ ಮಾಜಿ ಸಂಸದ ಕೆ ವಿರೂಪಾಕ್ಷಪ್ಪ ಅವರಿಂದ ಮಸ್ಕಿ ತಾಲ್ಲೂಕಿನ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರಾದ ಅಭಿಜಿತ್ ಮಾಲಿ ಪಾಟೀಲ್ , ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಹಾಲಾಪುರ, ಖಜಾಂಚಿ ರಾಘವೇಂದ್ರ ಅಬಕಾರಿ, ಸೇರಿದಂತೆ ಇತರರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಎಮ್.ದೊಡ್ಡ ಬಸವರಾಜ, ನಿರುಪಾದೆಪ್ಪ ವಕೀಲರು,ಮಲ್ಲನಗೌಡ ಸುಂಕನೂರು, ಶಿವರಾಜ್ ಪಾಟೀಲ್, ಮಲ್ಲಯ್ಯ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವರದಿ- ಸೈಯದ್ ಬಂದೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment