ಕೆಪಿಸಿಸಿ ಆಧ್ಯಕ್ಷ ಡಿಕೆಶಿ ಕೊರೋನಾ ಗೆದ್ದು ಬಂದ ಹಿನ್ನೆಲೆ ಅಭಿಮಾನಿಗಳಿಂದ ವಿಶೇಷ ಪೂಜೆ..!

ಕೋಲಾರ: ಕೆಪಿಸಿಸಿ ಆಧ್ಯಕ್ಷ ಡಿಕೆ ಶಿವಕುಮಾರ್ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಹಿನ್ನೆಲೆ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು 501 ತೆಂಗಿನಕಾಯಿ ಹೊಡೆದು ಪೂಜೆ ಸಲ್ಲಿಸಿದರು. ಕೋಲಾರ ನಗರದ ಆಧಿದೇವತೆ ಕೋಲಾರಮ್ಮ ದೇವಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷ ಕೆ. ಚಂದ್ರಾರೆಡ್ಡಿ ಹಾಗೂ ಡಿಕೆಶಿ ಅಭಿಮಾನಿಗಳು ಸಂಘದ ಜಿಲ್ಲಾಧ್ಯಕ್ಷ ಸುಚೀತ್ ಗೌಡ ನೇತೃತ್ವದಲ್ಲಿ ನೂರಾರು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ರು.ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗುತ್ತಿದೆ ಮುಂದಿನ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದು ಡಿಕೆ ಶಿವಕುಮಾರ್ ಸಿಎಂ ಅಗಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಆಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಇನ್ನೂ ಇದೇ ವೇಳೆ ಕರೋನಾ ಸೊಂಕಿಗೆ ಒಳಗಾಗಿರುವ ಮಾಲೂರು ಕ್ಷೇತ್ರದ ಶಾಸಕ ಕೆ.ವೈ ನಂಜೇಗೌಡ ಬೇಗ ಗುಣಮುಖರಾಗಿ ಆರೋಗ್ಯದಿಂದ ಹಿಂತಿರುಗಲಿ ಎಂದು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Please follow and like us:

Related posts

Leave a Comment