ವನದುರ್ಗ ಪಶು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ…!

ಶಹಾಪುರ : ಕಳೆದ ಮೂರು ನಾಲ್ಕು ತಿಂಗಳುಗಳಿಂದ ಪಶು ವೈದ್ಯಾಧಿಕಾರಿಗಳು ಬಾರದೆ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಜಾನುವಾರುಗಳೊಂದಿಗೆ ಗ್ರಾಮಸ್ಥರು ಪ್ರತಿಭಟನೆಗಿಳಿದಿರುವುದು ತಾಲ್ಲೂಕಿನ ವನದುರ್ಗ ಗ್ರಾಮದಲ್ಲಿ ಕಂಡು ಬಂದಿತು. ಇತ್ತೀಚಿನ ದಿನಗಳಲ್ಲಿ ಜಾನುವಾರುಗಳಿಗೆ ಚರ್ಮರೋಗ ಬರುತ್ತಿದ್ದು ಪಶು ಚಿಕಿತ್ಸಾ ವೈದ್ಯಾಧಿಕಾರಿಗಳು ಇತ್ತ ಬಾರದೇ ಆಸ್ಪತ್ರೆಗೆ ಬೀಗ ಹಾಕಿ ಚಕ್ಕರ್ ಹೊಡೆಯುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಇಂತಹ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಅಥವಾ ನಮ್ಮೂರಿನಿಂದ ವರ್ಗಾವಣೆ ಮಾಡಬೇಕು ಎಂದು ಪಟ್ಟು ಹಿಡಿದರು.ಮೇಲಧಿಕಾರಿಗಳು ಇತ್ತ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ವರದಿ- ಬಸವರಾಜ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ

Please follow and like us:

Related posts

Leave a Comment