ಕೋವಿಡ್-19 ನಿಂದಾಗಿ ಇಂದು ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಣೆ..!

ಮಳವಳ್ಳಿ: ದೇಶ ವ್ಯಾಪ್ತಿ ಕೋವಿಡ್ 19 ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಮಳವಳ್ಳಿ ಪಟ್ಟಣದ ರೈತ ಸಮುದಾಯಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಾ.ಪಂ ಅಧ್ಯಕ್ಷ ಸುಂದರೇಶ್ ಉದ್ಘಾಟಿಸಿದರು. ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ.ಕೆ ಅನ್ನದಾನಿ ವಹಿಸಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಮಳವಳ್ಳಿ ತಾಲ್ಲೂಕು ಹೆಚ್ಚು ಹೆಚ್ಚು ಪ್ರಗತಿಯತ್ತ ಧಾಮಿಸುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಡಾ.ಅಭಿಷೇಕಗೌಡ ಐಎಎಸ್ ಪರೀಕ್ಷೆಯಲ್ಲಿ ದೇಶಕ್ಕೆ ಕೀರ್ತಿತಂದಿದ್ದಾರೆ. ಇದಲ್ಲದೆ ಈ ಬಾರೀ ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಮೂರು ಸ್ಥಾನವನ್ನು ಪಡೆದುಕೊಂಡ ಕೀರ್ತಿ ನಮ್ಮ ತಾಲ್ಲೂಕಿಗೆ ಸಲ್ಲುತ್ತದೆ ಎಂದರು. ಶಿಕ್ಷಣ ಕ್ಷೇತ್ರ, ರಾಜಕೀಯ ಬೆರಸದೆ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವಂತೆ ಶಾಸಕ ಡಾ.ಕೆ ಅನ್ನದಾನಿ ಶಿಕ್ಷಕರಿಗೆ ಕಿವಿಮಾತು ನುಡಿದರು. ಇದೇ ವೇಳೆ ಡಾ ಸರ್ವಪಲ್ಲಿ ರಾಧಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ವಾರ್ಚನೆ ಸಲ್ಲಿಸಲಾಯಿತು.ಇನ್ನೂ ಕಾರ್ಯಕ್ರಮದಲ್ಲಿ ತಾ.ಪಂ ಇಓ ಸತೀಶ್ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ತಾ.ಪಂ ವಿರೋಧಪಕ್ಷ ನಾಯಕ ನಟೇಶ್ ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಶಿವಶಂಕರ್, ಎಲ್ಲಾ ವಿಭಾಗದ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ವರದಿ- ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment