ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯ..ಮತ್ತೆ ವಿಚಾರಣೆಗೆ ವಶಕ್ಕೆ ನೀಡುವಂತೆ ಕೇಳ್ತಾರಾ ಸಿಸಿಬಿ?

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಬಂಧನಕ್ಕೆ ಒಳಗಾದ ರಾಗಿಣಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಕಳೆದ ಶುಕ್ರವಾರ ರಾಗಿಣಿಯನ್ನ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಬೆನ್ನು ನೋವು ಹಾಗು ಜ್ವರ ಕಾಣಿಸಿಕೊಂಡ ಹಿನ್ನಲೆ ಶನಿವಾರ ವಿಚಾರಣೆ ನಡೆಸಿರಲಿಲ್ಲ. ನಿನ್ನೆ ಮಧ್ಯಾಹ್ನ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ತೆರಳಿದ್ದ ಸಿಸಿಬಿ ಅಧಿಕಾರಿಗಳು 4 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸತತ 4 ಗಂಟೆಗಳ ಸುದೀರ್ಘ ವಿಚಾರಣೆಯಲ್ಲಿ ಕೆಲ ಮಾಹಿತಿಗಳನ್ನ ನೀಡಿದ್ದಾರೆ ಎನ್ನಲಾಗಿದೆ. ಇದರ ಜೊತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಲಾಗಿದ್ದು, ಇಂದು ಅದರ ವಿಚಾರಣೆ ನಡೆಯಲಿದೆ. ಆದರೆ ರಾಗಿಣಿ ದ್ವಿವೇದಿಯನ್ನ ಮತಷ್ಟು ವಿಚಾರಣೆ ನಡೆಸಬೇಕೆಂದು ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment