ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಲಿದೆ ಐದು ಕೋಟಿ ವೆಚ್ಚದ ಮಾರುಕಟ್ಟೆ..!

Published

on

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸುದ್ದಿಗೋಷ್ಠಿ ನಡೆಸಿದ್ದು,ಮಾತನಾಡಿದ ಸಚಿವರು ಬೆಳ್ಳಂ ಬೆಳ್ಳಿಗ್ಗೆ ನಾನು ಹಲವು ಕಾಮಗಾರಿಗಳ ವೀಕ್ಷಣೆ ಮಾಡಿದ್ದೇನೆ, ಅಕ್ಟೋಬರ್ 5 ರಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರಿಂದ ಹಲವಾರು ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಹಾಗೂ ಗ್ಲಾಸ್ ಹೌಸ್ ನಲ್ಲಿ ಸುಮಾರು 17.50 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಜೊತೆಗೆ ಚಿಟಗುಪ್ಪಿ 19,50 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ನಡೆಯುತ್ತಿದೆ. ಮೀನು ಮಾರಾಟಗಾರರು ರಸ್ತೆಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ, ಇದ್ರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಹೀಗಾಗಿ 5 ಕೋಟಿ ವೆಚ್ಚದಲ್ಲಿ ಮಾರುಕಟ್ಟೆ ನಿರ್ಮಾಣವಾಗುತ್ತಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳ ಜಾರಿಯಲ್ಲಿ ವಿಳಂಬವಾಗಿದೆ ಅನಧಿಕೃತ ಲೇಔಟ್ ಗಳ ನಿರ್ಮಾಣವಾಗಿದ್ರೆ ದಂಡ ವಸೂಲಿ ಮೂಲಕ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. 34 ಕೋಟಿ ರೂಪಾಯಿ ಟಾಕ್ಸ್ ಸಂಗ್ರಹವಾಗಿದೆ. ಮೂರು ಮಹಾನಗರಗಳಿಗೆ 24/7 ಕುಡಿಯುವ ನೀರಿನ ಕಾಮಗಾರಿಗೆ 2800 ಕೋಟಿ ಅನುದಾನ ಬೇಕಿದೆ. ಈ ಕುರಿತಾಗಿ ಸಿಎಂ ಜೊತೆ ಚರ್ಚೆ ನಡೆಸಿ ಅನುದಾನ ಬಿಡುಗಡೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಬಳ್ಳಾರಿ, ಬಿಜಾಪುರ, ಮೈಸೂರು, ಗುಲ್ಬರ್ಗ ದಲ್ಲೂ ಸ್ಮಾರ್ಟ್ ಸಿಟಿ ಯೋಜನೆ ಜಾರಿ ಮಾಡಲು ಕೇಂದ್ರಕ್ಕೆ ಮನವಿ ಮಾಡಲಾಗಿದೆ, ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ನಲ್ಲಿ ಫೈ ಓವರ್ ನಿರ್ಮಾಣಕ್ಕೆ ಟೆಂಡರ್ ಕೂಡ ಕೂಗಲಾಗಿದೆ ಎಂದು ಸಚಿವ ಭೈರತಿ ಬಸವರಾಜ್ ತಿಳಿಸಿದರು.

ವರದಿ- ರಾಜುಮುದುಗಲ್ ಎಕ್ಸ್ ಪ್ರೆಸ್ ಟಿವಿ ಹುಬ್ಬಳ್ಳಿ

Click to comment

Trending

Exit mobile version