ಗುಲ್ಬರ್ಗ ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡದಂತೆ ಚನ್ನರೆಡ್ಡಿ ನಂದಿಹಾಳ ಆಗ್ರಹ..!

ಸಿಂಧನೂರು: ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆ ಮುಂದೂಡದೆ ನಿಗದಿತ ಅವಧಿಯಲ್ಲಿ ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಳ್ಳಾರಿ ವಿಭಾಗದ ಸಂಚಾಲಕರಾದ ಚನ್ನರೆಡ್ಡಿ ನಂದಿಹಾಳ ಆಗ್ರಹ. ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ದಿನದಿಂದ ದಿನಕ್ಕೆ ಮುಂದೂಡುವ ಮೂಲಕ ಅಂತಿಮ ವರ್ಷದ ವಿದ್ಯಾರ್ಥಿಗಳ ಜೊತೆಗೆ ಚೆಲ್ಲಾಟವಾಡುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಗೊಂದಲವಾಗುತ್ತಿದೆ. ಈಗಾಗಲೇ ಬೇರೆ ಬೇರೆ ವಿಶ್ವವಿದ್ಯಾಲಯವು ನಿಗದಿಪಡಿಸಿದ ದಿನಾಂಕದಂದೇ ಪರೀಕ್ಷೆಗಳನ್ನು ನಡೆಸುತ್ತಿದ್ದು. ಗುಲ್ಬರ್ಗ ವಿಶ್ವವಿದ್ಯಾಲಯವು ಮಾತ್ರ ಪರೀಕ್ಷೆಗಳನ್ನು ಮುಂದೂಡುತ್ತಿರುವುದು ಯಾಕೆ. ಕೂಡಲೇ ಸರ್ಕಾರ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಪರೀಕ್ಷೆ ನಡೆಸುವಂತೆ ಸೂಚಿಸಬೇಕು .ಒಂದು ವೇಳೆ ಮತ್ತೆ ಗುಲ್ಬರ್ಗ ವಿಶ್ವವಿದ್ಯಾಲಯವು ಪರೀಕ್ಷೆಗಳನ್ನು ಮುಂದೂಡಿದರೆ ಉಗ್ರವಾದ ಹೋರಾಟವನ್ನು ಮಾಡಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ವರದಿ-ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು

Please follow and like us:

Related posts

Leave a Comment