ಸಿನಿಮಾ

ನಟಿ ರಾಗಿಣಿ ದ್ವಿವೇದಿ ಮತ್ತೆ ಐದು ದಿನ ಸಿಸಿಬಿ ಕಸ್ಟಡಿಗೆ.!

Published

on

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಸಿಬಿ ಕಸ್ಟಡಿಯಲ್ಲಿ ಇದ್ದ ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ. ಕಳೆದ ಶುಕ್ರವಾರ ಸಂಜೆ ಸಿಸಿಬಿ ಅಧಿಕಾರಿಗಳು ರಾಗಿಣಿ ದ್ವಿವೇದಿಯನ್ನ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮೂರು ದಿನಗಳ ಕಾಲ ವಿಚಾರಣೆಗೆ ಅವಕಾಶ ನೀಡಲಾಗಿತ್ತು. ಇಂದು ಕಸ್ಟಡಿ ಅಂತ್ಯ ಹಿನ್ನೆಲೆ ಮತ್ತೆ ನ್ಯಾಯಾಧೀಶರ ಮುಂದೆ ಸಿಸಿಬಿ ಅಧಿಕಾರಿಗಳು ಹಾಜರು ಪಡಿಸಿ, 10 ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಸಿಸಿಬಿ ಪರ ವಕೀಲರ ವಾದವನ್ನ ಆಲಿಸಿದ ನ್ಯಾಯಮೂರ್ತಿ. ಜಗದೀಶ್ ಅವರು 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version