ಗ್ರಾಮ ಪಂಚಾಯಿತಿ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಲಿ – ಬಸನಗೌಡ ಯಡಿಯಾಪುರ..!

ಶಹಾಪುರ : ಕೊರೋನಾ ವೈರಸ್ ಮಹಾಮಾರಿಯಿಂದ ಗ್ರಾಮ ಪಂಚಾಯಿತಿ ಮಟ್ಟದ ನನೆಗುದಿಗೆ ಬಿದ್ದಿರುವ ಕಾಮಗಾರಿಗಳು ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಬಸನಗೌಡ ಪಾಟೀಲ್ ಯಡಿಯಾಪುರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಕಿಶನ್ ರಾಠೋಡ್ ಮಾತನಾಡಿ ಚಾಮನಾಳ, ಸಗರ, ಹಾಗೂ ಇನ್ನಿತರ ಗ್ರಾಮ ಪಂಚಾಯಿತಿಗಳಲ್ಲಿ ಶೇ 75%ರಷ್ಟು ಕಾಮಗಾರಿ ಬೋಗಸ್ ಆಗಿವೆ ಎಂದು ಆರೋಪಗಳು ಕೇಳಿ ಬಂದಿದೆ.ಆದ್ದರಿಂದ ಆ ಕಾಮಗಾರಿಯನ್ನು ಕೂಡಲೇ ಪರಿಶೀಲಿಸಿ ತನಿಖಾ ತಂಡ ರಚಿಸಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕರೊನಾ ವೈರಸ್ ಮಹಾಮಾರಿಯ ವಿರುದ್ಧ ಸಾರ್ವಜನಿಕರೊಂದಿಗೆ ಕೆಲಸ ಮಾಡಿದ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಅಧ್ಯಕ್ಷರು ಉಪಾಧ್ಯಕ್ಷರು ಅಭಿನಂದನೆ ಸಲ್ಲಿಸಿದರು.ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅಬ್ದುಲ್ ನಬಿ ಅವರು ಮಾತನಾಡಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬರುವ ಕಾಮಗಾರಿಗಳು ಹಾಗೂ ಗ್ರಾಮೀಣ ಭಾಗದ ರಸ್ತೆ ಕುಡಿಯುವ ನೀರು ಇನ್ನಿತರ ಮೂಲಭೂತ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಜನರಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಸಿಬ್ಬಂದಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಶಾರದಮ್ಮ ನಾಗಲೋಟ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ-ಬಸವರಾಜ್ ಸಿನ್ನೂರ ಎಕ್ಸ್ ಪ್ರೆಸ್ ಟಿವಿ ಶಹಾಪುರ..

Please follow and like us:

Related posts

Leave a Comment