ನಟಿ ಸಂಜನಾ ಗಲ್ರಾನಿ ಮನೆ ಮೇಲೆ ಸಿಸಿಬಿ ದಾಳಿ..!

ಬೆಂಗಳೂರು :ಸ್ಯಾಂಡಲ್ವುಡ್ ಡ್ರಗ್ಸ್ ಲಿಂಕ್ ಪ್ರಕರಣ ಸಂಬಂಧ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಕಳೆದ ವಾರವೇ ನಟಿ ಸಂಜನಾಗೆ ನೋಟಿಸ್ ನೀಡುವ ಬಗ್ಗೆ ಕೇಳಿ ಬಂದಿತ್ತು. ಆಪ್ತ ರಾಹುಲ್ ಹಾಗು ಆಪ್ತೆ ಪೃಥ್ವಿ ಶೆಟ್ಟು ನೀಡಿದ ಹೇಳಿಕೆ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಮನೆಯಲ್ಲಿ ಶೋಧಕಾರ್ಯ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು, 9 ಗಂಟೆ ಒಳಗೆ ಕಾರ್ಯಾಚರಣೆ ಮುಗಿಸಿ, ಸಂಜನಾ ಗಲ್ರಾನಿಯನ್ನ ಸಿಸಿಬಿ ಕಚೇರಿಗೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment