ಸಿನಿಮಾ

ಖ್ಯಾತ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ಕರ್ ನಿಧನ..!

Published

on

ಬೆಂಗಳೂರು : ಖ್ಯಾತ ಹಿರಿಯ ನಟ ಸಿದ್ದರಾಜ್ ಕಲ್ಯಾಣ್ಕರ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.ನಿನ್ನೆ ರಾತ್ರಿ ಹೃದಾಘಾತವಾಗಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಮೂಲದವರಾದ ಸಿದ್ದರಾಜ್ ಕಲ್ಯಾಣ್ಕರ್, ಹಲವು ಸಿನಿಮಾಗಳಲ್ಲಿ ಪೋಷಕ ನಟನಾಗಿ ಕಾಣಿಸಿಕೊಂಡಿದ್ದಾರೆ. ಸುಮಾರು 70 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಸಿದ್ದರಾಜ್ ಕಲ್ಯಾಣ್ಕರ್ ನಟಿಸಿದ್ದಾರೆ. ನಿನ್ನೆಯಷ್ಟೇ ತಮ್ಮ 60ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಸಿದ್ದರಾಜ್ ಇದ್ದಕಿದ್ದಂತೆ ನಿಧನರಾಗಿದ್ದಾರೆಂದು ಕೇಳಿ ಆಘಾತವಾಗಿದೆ ಎಂದು ನಿರ್ದೇಶಕ ಬೀಸು ಸುರೇಶ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version