ಮಂಡ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ತರಭೇತಿ ಕಾರ್ಯಕ್ರಮ..!

Published

on

ಮಳವಳ್ಳಿ: ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಸೇವೆಗಳು, ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಂಗವಾಗಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮವನ್ನು ಮಳವಳ್ಳಿ ಪಟ್ಟಣದ ಬಿಆರ್ ಸಿ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಚಾಲನೆ ನೀಡಿ ಮಾತನಾಡಿ, ಶಿಕ್ಷಕರಲ್ಲಿ ಮಾನಸಿಕ ಒತ್ತಡ ಇದ್ದರೆ ಮಕ್ಕಳಿಗೆ ಪಾಠ ಮಾಡಲು ಸಮಸ್ಯೆಯಾಗಲಿದ್ದು, ಮಾನಸಿಕ ಒತ್ತಡವಿರಬಾರದು, ಅದಕ್ಕಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು. ವಿಜ್ಞಾನ ಹಾಗೂ ಗಣಿತ ಶಿಕ್ಷಕರಿಗೆ ಮಾನಸಿಕ ಒತ್ತಡ ವನ್ನು ನಿವಾರಿಸಿಕೊಳ್ಳುವ ಬಗ್ಗೆ ತರಬೇತಿ ನೀಡುತ್ತಿದೆ. ಇದರಿಂದ ಮಕ್ಕಳಿಗೆ ಉತ್ತಮ ಬೋದನೆ ಮಾಡಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಡಾ .ಶಶಾಂಕ್ ರವರು ಯಾವ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳವ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ವೀರಣ್ಣಗೌಡ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಕಚೇರಿ ಮೇಲ್ವಿಚಾರಕ ಚಿಕ್ಕರಸೇಗೌಡ ಸಿಆರ್ ಸಿಗಳಾದ ಕಾಳೇರಾಜೇಗೌಡರು, ಯೋಗಾನಂದ , ಶಿವಕುಮಾರ ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ : ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version