ಮದಲೂರು ಕೆರೆಗೆ ನಾವು ನೀರು ಹರಿಸುತ್ತೇವೆಂದ ಬಾಜಪ ಮುಖಂಡರು..!

ಶಿರಾ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಮದಲೂರು ಕೆರೆಗೆ ನೀರು ಹರಿಸುತ್ತೇವೆಂದು ರಾಜಕೀಯ ಮಾಡಿಕೊಂಡು ಬಂದಿದ್ದು, ಅವರಿಗೆ ನೀರು ಹರಿಸುವ ಬದ್ಧತೆ ಇರುವುದಿಲ್ಲ. ನಾವು ನೀರನ್ನು ಹರಿಸಿ ನಮ್ಮ ಬದ್ಧತೆಯನ್ನು ತೋರಿಸುತ್ತೇವೆಂದು ಬಾಜಪ ಮುಖಂಡರು.ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಹಾಗೂ ಕಮಿಟಿ ರಚನೆ ನಂತರ ಸುದ್ದಿ ಗೋಷ್ಠಿಯಲ್ಲಿ ಬೆಳ್ಳಂಬೆಳ್ಳ ಹೋಬಳಿ ಮರಳಪ್ಪನಹಳ್ಳಿ, ಭೂಪಸಂದ್ರ ಗ್ರಾಮ, ಕಳ್ಳಿಪಾಳ್ಯ ಗ್ರಾಮಗಳಲ್ಲಿ ಸಭೆ ನಡೆಸಿ ಚಿಕ್ಕತಿಮ್ಮನಹಳ್ಳಿ ಕುನ್ನಾಲಮ್ಮ ದೇವಸ್ಥಾನದ ಬಳಿ ಕಾರ್ಯಕರ್ತರುಗಳ ಸಭೆಗಳನ್ನು ನಡೆಸಿ ನಂತರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ. ನಾರಾಯಣ ಸ್ವಾಮಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡರವರು ಮಾಜಿ ಶಾಸಕರಾದ ಕಿರಣ್ ಕುಮಾರ್ ರವರು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ರವರು ಸೇರಿದಂತೆ ಹಲವು ಮುಖಂಡರು ಮಾತನಾಡುತ್ತಾ ಕ್ಷೇತ್ರದಲ್ಲಿ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲಾಗುವುದು, ಅಲ್ಪಸಂಖ್ಯಾತರ ಮತಗಳ ಮೇಲೆ ನಮಗೆ ಅಲ್ಲಿ ನಂಬಿಕೆ ಇಲ್ಲ, ನಮ್ಮ ವೋಟ್ ಬ್ಯಾಂಕ್ ಬೇರೆ ಇದೆ ಎಂದರು.ಮದಲೂರು ಕೆರೆಗೆ ನೀರು ತುಂಬಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಮದಲೂರು ಕೆರೆಯನ್ನು ಮುಂದಿಟ್ಟುಕೊಂಡು ಅಲ್ಲಿ ರಾಜಕೀಯ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶಿರಾದಲ್ಲಿ ಎಸ್.ಆರ್ ಗೌಡ ಅಥವಾ ಮಂಜುನಾಥ್ ಅವರಿಗೆ ಟಿಕೆಟ್ ನೀಡುವಂತೆ ವರಿಷ್ಠರಲ್ಲಿ ಕೇಳಿದ್ದೇವೆ. ಯಾರಿಗೆ ಟಿಕೆಟ್ ನೀಡಿದರೂ ಶೇ.100 ರಷ್ಟು ಬಿಜೆಪಿ ಗೆಲುವು ಸಾಧಿಸಲಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅಭ್ಯರ್ಥಿಯನ್ನು ಘೋಷಣೆ ಮಾಡಿದ ನಂತರ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದೆಂದು ತಿಳಿಸಿರುತ್ತಾರೆ. ಸಭೆಯಲ್ಲಿ ತುಮಕೂರು ಹಾಲು ಒಕ್ಕೂಟ ಸದಸ್ಯ ಎಸ್ ಆರ್ ಗೌಡ.ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ ಸೇರಿದಂತೆ ಹಲವಾರು ಮುಖಂಡರು ಹಾಜರಾಗಿದ್ದರು..

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ಶಿರಾ

Please follow and like us:

Related posts

Leave a Comment