ಕೋಲಾರ

ಕೋಲಾರದಲ್ಲಿ 100 ಕೆಜಿಗೂ ಆಧಿಕ ಗಾಂಜಾ ವಶ..!

Published

on

ಕೋಲಾರ: ಕೋಲಾರದ ಕೆಜಿಎಫ್ ಪೊಲೀಸರು ಗಾಂಜಾ ಮಾರಾಟ ಅಡ್ಡೆಗಳ ಮೇಲೆ ದಾಳಿ ನಡೆಸಿ ಒಂಟಿ ಮನೆಯಲ್ಲಿ ಸಂಗ್ರಹಿಸಿದ್ದ 100 ಕೆಜಿಗೂ ಅಧಿಕ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಸುಮಾರು 50 ಲಕ್ಷಕ್ಕೂ ಅಧಿಕ ಬೆಲೆಬಾಳುವ ಗಾಂಜಾವನ್ನು ಕೆಜಿಎಫ್ ನಗರದ ಕೃಷ್ಣಗಿರಿ ಲೈನ್ ನಲ್ಲಿರುವ ಒಂಟಿ ಮನೆಯಲ್ಲಿ ಪತ್ತೆಯಾಗಿದೆ. ಇನ್ನೂ ಆಂದ್ರಪ್ರದೇಶ ಮತ್ತು ತಮಿಳುನಾಡಿನಿಂದ ಗಾಂಜಾವನ್ನು ತರಿಸಿ ಅಕ್ರಮವಾಗಿ ಮಾರಾಟ ಮಾಡಲು ಶೇಖರಣೆ ಮಾಡಲಾಗಿತ್ತು ಎನ್ನಲಾಗಿದೆ. ಡಿವೈಎಸ್ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ. ಇನ್ನೂ ಆರೋಪಿಗಳು ಹಾಗೂ ಘಟನೆ ಕುರಿತು ಹೆಚ್ಚಿನ ಮಾಹಿತಿ ನೀಡಲು ಪೋಲಿಸರು ನಿರಾಕರಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ವರದಿ-ಬೆಟ್ಟಪ್ಪ ಎಕ್ಸ್ ಪ್ರೆಸ್ ಟಿವಿ ಕೋಲಾರ

Click to comment

Trending

Exit mobile version