ಅಧ್ಯಕ್ಷರಿಗೆ ವರದಿ ಸಲ್ಲಿಸಿದ ಕರ್ನಾಟಕ ವಿಧಾನ ಮಂಡಲ ಹಕ್ಕು ಭಾದ್ಯತ ಸಮಿತಿ..!

ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಹಕ್ಕು ಭಾದ್ಯತ ಸಮಿತಿಯು ತನ್ನ ವರದಿಯನ್ನು ಇಂದು ಮಧ್ಯಾಹ್ನ ವಿಧಾನ ಸಭೆ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸಲ್ಲಿಸಿತು. ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪುರ್ ಅವರು ಸಮಿತಿ ಸದಸ್ಯರ ಪರವಾಗಿ ವರದಿ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ಸಮಿತಿಯ ಸದಸ್ಯರು ಹಾಗೂ ಸಿಂಧನೂರಿನ ಶಾಸಕರಾದ ವೆಂಕಟರಾವ್ ನಾಡಗೌಡ, ವೀರಭದ್ರಯ್ಯ ಮತ್ತು ಅಶ್ವಿನ್ ಕುಮಾರ್ ಉಪಸ್ಥಿತರಿದ್ದರು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment