ಬೆಂಗಳೂರು

ಕೃಷಿ ಅಧಿಕಾರಿಗಳು ರೈತಸ್ನೇಹಿಗಳಾಗಬೇಕೇ ಹೊರತು ವ್ಯಾಪಾರಿ ಸ್ನೇಹಿಯಲ್ಲ- ಬಿ.ಸಿ.ಪಾಟೀಲ್..!

Published

on

ಬೆಂಗಳೂರು: ಕೃಷಿ ಅಧಿಕಾರಿಗಳು ರೈತ ಸ್ನೇಹಿಗಳಾಗಬೇಕೇ ಹೊರತು ವ್ಯಾಪಾರಿ ಸ್ನೇಹಿಗಳಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯ ಕುವೆಂಪು ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಅಧಿಕಾರಿಗಳು ರೈತಸ್ನೇಹಿಗಳಾಗಬೇಕು ರೈತರಿಗೆ ಅಧಿಕಾರಿಗಳು ಸ್ಥಳೀಯವಾಗಿ ಸಿಗುವಂತಾಗಬೇಕು. ರೈತರೇ ಉತ್ತಮ ಅಧಿಕಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸುವಂತಾಗಬೇಕು. ಕೃಷಿ ಇಲಾಖೆಯ ಅಭಿವೃದ್ಧಿಗೆ ರೈತರಿಗೆ ಅನುಕೂಲಕಲ್ಪಿಸಲು ಅಧಿಕಾರಿಗಳು ಯೋಜನೆಗಳನ್ನು ರೂಪಿಸಬೇಕು. ಅಧಿಕಾರಿಗಳು ರೈತರ ಅಭಿವೃದ್ಧಿಗಾಗಿ ನೀಡುವ ಸಲಹೆಗಳನ್ನು ಸ್ವೀಕರಿಸಲಾಗುವುದು. ಈ ಬಾರಿ 101% ಬಿತ್ತನೆಯಾಗಿರುವುದು ಇಲಾಖೆಯ ಸಾಧನೆಯಾಗಿದೆ ಎಂದರು. ರೈತರೇ ಮುಂದಿನ ವರ್ಷದಿಂದ ತಮ್ಮ ಬೆಳೆಯ ಸಮೀಕ್ಷೆಯನ್ನು ತಾವೇ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈವರ್ಷದಲ್ಲಿ ಬೆಳೆ ಸಮೀಕ್ಷೆಗೆ ಪ್ರಾಯೋಗಿಕ ಕೆಲಸ ಮಾಡಲಾಗಿದೆ. ಕೆಲವೇಡೆ ತಂತ್ರಜ್ಞಾನದಿಂದ ಮಳೆಯಿಂದ ಸಮೀಕ್ಷೆಗೆ ತೊಂದರೆಯಾಗಿರಬಹುದಷ್ಟೇ. ಆದರೆಪ್ರಾಯೋಗಿಕತೆ ಯಶಸ್ವಿಯಾಗುತ್ತಿದೆ. ಬೆಳೆ ಸಮೀಕ್ಷೆಗೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಲೇಬೇಕು. ಸರ್ಕಾರದ ಸೌಲಭ್ಯಗಳಿಗೆ ರೈತರು ತಪ್ಪದೇ ಆ್ಯಪ್ ಬೆಳೆ ಸಮೀಕ್ಷೆ ತಪ್ಪದೇ ಮಾಡಬೇಕು. ಅಧಿಕಾರಿಗಳು ಇನ್ನಷ್ಟು ಹೆಚ್ಚು ಶ್ರಮ ಮತ್ತು ಆಸಕ್ತಿವಹಿಸಿ ಬೆಳೆ ಸಮೀಕ್ಷೆ ಮಾಡಿಸಬೇಕು ಎಂದು ಸಚಿವರು ಕರೆ ನೀಡಿದರು. ಕೃಷಿ ಇಲಾಖೆಗೆ ಎಲ್ಲರೂ ಪ್ರೋತ್ಸಾಹ ನೀಡುತ್ತಿದ್ದಾರೆ. ಪ್ರಧಾನಿಗಳು ಸಹ ಆಹಾರ ಉತ್ಪಾದನೆ ಕೃಷಿಗೆ ಹೆಚ್ಚು ಒತ್ತು ನೀಡಿ ಅನುದಾನ ನೀಡುತ್ತಿದ್ದಾರೆ ನಮ್ಮಇಲಾಖೆಯ ಕೆಲಸ ನಾವೇ ಮಾಡಬೇಕು. ಅಧಿಕಾರಿಗಳು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಲಾಖೆಯ ಅಭಿವೃದ್ಧಿಗಳನ್ನು ಮಾಹಿತಿಗಳನ್ನು ನೀಡಬೇಕು ಎಂದರು. ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾಕ್ಕಾಗಲೀ ರಸಗೊಬ್ಬರಕ್ಕಾಗಲೀ ಕೊರತೆಯಿಲ್ಲ ಸರಬರಾಜು ಹಂಚಿಕೆಯಲ್ಲಿ ಎಲ್ಲೋ ಒಂದೆರಡು ಕಡೆ ವಿಳಂಬವಾಗಿರಬಹುದಷ್ಟೇ. ಆದರೆ ವಾಸ್ತವವಾಗಿ ಕೊರತೆಯಿಲ್ಲ ಕಾಳಸಂತೆ ಮಾರಾಟ ಸುಳ್ಳು ತಪ್ಪು ಮಾಹಿತಿ ನೀಡುವವರ ವಿರುದ್ಧ ಎಚ್ಚರಿಕೆ ವಹಿಸಬೇಕು ಎಂದರು. ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version