ಡ್ರಗ್ಸ್ ಮಾಫಿಯಾ ಪ್ರಕರಣ : ಸಿಸಿಬಿ ಕಚೇರಿಗೆ ಬಂದ ಇಡಿ ಅಧಿಕಾರಿಗಳು..!

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಆರೋಪ ಕೇಳಿ ಬಂದ ಹಿನ್ನೆಲೆ ಸಿಸಿಬಿ ಕಚೇರಿಗೆ ಇಡಿ ಅಧಿಕಾರಿಗಳಾದ ಇಡಿ ಅಸಿಸ್ಟೆಂಟ್ ಡೈರೆಕ್ಟರ್ ಬಸವರಾಜ್ ಆಗಮಿಸಿದ್ದು,ಇವರ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಿದ್ದಾರೆ. ಪ್ರಕರಣದ ಮಾಹಿತಿ ಪಡೆಯಲು ಸಿಸಿಬಿ ಕಚೇರಿಗೆ ಬಂದಿದ್ದಾರೆ ಎನ್ನಲಾಗಿದೆ. ಇನ್ನು ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಂಧಿತನಾಗಿರುವ ಲೂಮ್ ಪೆಪ್ಪರ್ ಮೂಲಕ ವಿದೇಶದಲ್ಲಿ ಹಣ ಹೂಡಿಕೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ನಟಿ ರಾಗಿಣಿ ದ್ವಿವೇದಿ ಹಾಗು ಸಂಜನಾ ಗಲ್ರಾನಿ ಸೇರಿದಂತೆ ಬಂಧಿತರಿಂದ ಮಾಹಿತಿ ಪಡೆದ ಬಳಿಕ ಸ್ವತಂತ್ರವಾಗಿ ತನಿಖೆ ನಡೆಸಲು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸಿದ್ಧತೆ ನಡೆಸಿಕೊಂಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿರೇನ್ ಖನ್ನರನ್ನ ಕೂಡ ಇಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಲಿದ್ದಾರೆ. ವಿರೇನ್ ಖನ್ನಾ ವಿದೇಶದಲ್ಲಿ ಇವೆಂಟ್ಗಳನ್ನ ಆಯೋಜನೆ ಮಾಡಿದ್ದು, ಹಣ ವರ್ಗಾವಣೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಹಲವು ಸಾಕ್ಷ್ಯಾಧಾರಗಳನ್ನ ವಶಕ್ಕೆ ಪಡೆದಿದ್ದಾರೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment