ಡ್ರಗ್ಸ್ ಮಾಫಿಯಾ ಪ್ರಕರಣ : ನಟಿ ರಾಗಿಣಿ,ಸಂಜನಾಗೆ ಮೆಡಿಕಲ್ ಟೆಸ್ಟ್.

ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ಪ್ರಕರಣದ ತನಿಖೆ ದಿನದಿಂದ ದಿನಕ್ಕೆ ಹೊಸ ಲೀಡ್ ಪಡೆಯುತ್ತಿದೆ. ಈಗಾಗಲೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನ ವಿಚಾರಣೆ ನಡೆಸಿರುವ ಸಿಸಿಬಿ ಅಧಿಕಾರಿಗಳು ಮಹತ್ವದ ಸಾಕ್ಷ್ಯಾಧಾರಗಳ ಮಾಹಿತಿ ಕಲೆ ಹಾಕುವಲ್ಲಿ ಸಿಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈಗಾಗಲೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ನಟಿ ರಾಗಿಣಿ ದ್ವಿವೇದಿ ಹಾಗು ನಟಿ ಸಂಜನಾ ಗಲ್ರಾನಿ ಅವರಿಗೆ ವೈದ್ಯಕೀಯ ಪರೀಕ್ಷೆಗಾಗಿ ಕರೆದುಕೊಂಡು ಬರಲಾಗಿದೆ. ಸಿಸಿಬಿ ಅಧಿಕಾರಿ ಅಂಜುಮಾಲಾ ನೇತೃತ್ವದಲ್ಲಿ ನಟಿಯರನ್ನ ಕರೆದುಕೊಂಡು ಬಂದಿದ್ದು, ವೈದ್ಯಕೀಯ ಪರೀಕ್ಷೆ ಆರಂಭವಾಗಿದೆ. ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ನಟಿಯರನ್ನ ಮಡಿವಾಳದ ಬಳಿ ಇರುವ ಎಫ್ಎಸ್ಎಲ್ ಕರೆದುಕೊಂಡು ಹೋಗಿ ಮತಷ್ಟು ವಿಚಾರಣೆಗಳನ್ನ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Please follow and like us:

Related posts

Leave a Comment