ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಗೆ ಸಾರ್ವಜನಿಕ ಆಸ್ವತ್ರೆ ಆವರಣದಲ್ಲಿ ಚಾಲನೆ..!

ಮಳವಳ್ಳಿ: ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿ ಮತ್ತು ಸಾರ್ವಜನಿಕ ಆಸ್ವತ್ರೆ ವತಿಯಿಂದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಆತ್ಮಹತ್ಯೆ ತಡೆಗಟ್ಟಲು ಎಲ್ಲರೂ ಒಗ್ಗೂಡಿ ದುಡಿಯೋಣ ಎಂಬ ಘೋಷಣೆ ರಥಕ್ಕೆ ಸಾರ್ವಜನಿಕ ಆಸ್ವತ್ರೆ ಆವರಣದಲ್ಲಿ ಚಾಲನೆ ನೀಡಲಾಯಿತು. ಸಾರ್ವಜನಿಕ ಆಸ್ವತ್ರೆ ಆಡಳಿತಾಧಿಕಾರಿ ಡಾ.ಮಹದೇವನಾಯಕರವರು ರಥಕ್ಕೆ ಚಾಲನೆ ನೀಡಿ ಮಾತನಾಡಿ, ಆತ್ಮಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸ ಬೇಕಾಗಿದೆ ಅದಕ್ಕಾಗಿ ತಾಲ್ಲೂಕು ಹಾಗೂ ಪಟ್ಟಣದಲ್ಲಿ ರಥ ಸಂಚರಿಸಿ ಆತ್ಮಹತ್ಯೆ ಮಾಡುಕೊಳ್ಳವ ಮನಸ್ಸು ಇರುವವರೆಗೆ ಆತ್ಮಸ್ಥೆರ್ಯ ತುಂಬುವ ಕೆಲಸ ಮಾಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣಾಧಿಕಾರಿ ಡಾ. ವೀರಣ್ಣಗೌಡ, ನೋಡಲ್ ಅಧಿಕಾರಿ ಮಹಮ್ಮದ್ ಸುಹೇಲ್, ರವಿಕುಮಾರ, ಉಮಾಪತಿ ಸೇರಿದಂತೆ ಮತ್ತಿತ್ತರರು ಇದ್ದರು.

ವರದಿ : ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Please follow and like us:

Related posts

Leave a Comment