ಮಾಧ್ಯಮಗಳ ಮುಂದೆ ಸುಳ್ಳು ಹೇಳಿದ್ರಾ ಸಂಜನಾ ಗಲ್ರಾನಿ : ಫೋಟೊ ವೈರಲ್!

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಡೀಲ್ ವಿಚಾರದಲ್ಲಿ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಗಲ್ರಾನಿ ಮದುವೆಯಾಗಿರುವ ಫೋಟೊ ವೈರಲ್ ಆಗಿದೆ. ಆದರೆ ಮಾಧ್ಯಮಗಳ ಮುಂದೆ ನನಗೆ ಮದುವೆಯಾಗಿಲ್ಲ ಅಂತ ಹೇಳಿಕೆ ನೀಡಿದ್ದ ಸಂಜನಾ ಮೇಲೆ ಇದೀಗ ಅನುಮಾನ ಮೂಡಲು ಕಾರಣವಾಗಿದೆ. ಬಂಧನಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ನನಗೆ ಮದುವೆಯಾಗಿಲ್ಲ. ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಆದರೆ ಇದೀಗ ಒಂದು ವರ್ಷದ ಮುಂಚೆಯೇ ಮದುವೆಯಾಗಿರುವ ಫೋಟೊ ಇದೀಗ ಎಲ್ಲೆಡೆ ವೈರಲ್ ಆಗಿದೆ. ಇನ್ನು ಒಂದು ವರ್ಷದ ಮುಂಚಯೇ ನಟಿ ಸಂಜನಾ ಮುಸ್ಲಿಂ ಸಂಪ್ರದಾಯದಂತೆ ವೈದ್ಯ ಅಜೀಜ್ ಪಾಷ ಅವರನ್ನ ಮದುವೆಯಾಗಿದ್ದಾರೆ ಎನ್ನಲಾಗಿದೆ.ಮದುವೆ ಬಳಿಕ ಒಂದು ವರ್ಷದಿಂದ ಗಂಡನ ಜೊತೆ ವಾಸವಾಗಿದ್ದರು, ಅಲ್ಲದೇ ಸಂಜನಾ ಮಾಡುತ್ತಿದ್ದ ಪಾರ್ಟಿಯಲ್ಲಿ ವೈದ್ಯ ಅಜೀಜ್ ಕೂಡ ಭಾಗಿಯಾಗುತ್ತಿದ್ದರು ಎನ್ನಲಾಗಿದೆ.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Please follow and like us:

Related posts

Leave a Comment