ರಾಯಚೂರು: ಸಿಂಧನೂರು ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡರಿಗೆ ಗುರುವಾರ ಕೋವಿಡ್-19 ಪಾಸಿಟಿವ್ ಆಗಿರುವುದು ದೃಢವಾಗಿದೆ.ಈ ಕುರಿತು ಅವರ ಸಹೋದರ ಬಸವರಾಜ ನಾಡಗೌಡ ಖಚಿತಪಡಿಸಿದ್ದಾರೆ. ಸದ್ಯ ಶಾಸಕ ವೆಂಕಟರಾವ್ ನಾಡಗೌಡ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕದಲ್ಲಿ ಇದ್ದವರು ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.
ವರದಿ- ಸೈಯದ್ ಬಂಧೇನವಾಜ್ ಎಕ್ಸ್ ಪ್ರೆಸ್ ಟಿವಿ ಸಿಂಧನೂರು