ಪೊಲೀಸರ ಕಾರ್ಯಾಚರಣೆ, ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರಕಲಮಟ್ಟಿ ಕ್ರಾಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನ ಸಿಇಎನ್ ಕ್ರೈ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.ಆರೋಪಿಗಳಿಂದ 5 ಕೆಜಿ 570 ಗ್ರಾಮ್ ಗಾಂಜಾ ವಶಪಡಿಸಿಕೊಂಡಿದ್ದಾರೆ.ಅದರ ಅಂದಾಜು ಮೌಲ್ಯ 23 ಸಾವಿರ ರೂಪಾಯಿ ಎನ್ನಲಾಗಿದೆ. ಕೊಪ್ಪಳ ಜಿಲ್ಲೆಯ ಕುಣಕೇರಿ ತಾಂಡಾದ ರಾಘವೇಂದ್ರ ಪೂಜಾರಿ,ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಶಂಕರ ಹರಣಶಿಕಾರಿ ಹಾಗೂ ಕೊಪ್ಪಳ ಜಿಲ್ಲೆ ಯರಿಹಂಚಿನಾಳ ಗ್ರಾಮದ 17 ವರ್ಷದ ಬಾಲಕ ಬಂಧಿತ ಆರೋಪಿಗಳು.ಬಂಧಿತರಿಂದ 2 ಸಾವಿರ ರೂ. ನಗದು ಹಣ,ಮೂರು ಮೊಬೈಲ್ ಹಾಗೂ ಎರಡು ಬೈಕ್ ಜಪ್ತಿ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಲೋಕೇಶ್ ಜಗಲಾಸರ್ ಮಾಹಿತಿ ನೀಡಿದ್ದಾರೆ.

ವರದಿ- ಎಕ್ಸ್ ಪ್ರೆಸ್ ಟಿವಿ ಬಾಗಲಕೋಟೆ..

Please follow and like us:

Related posts

Leave a Comment