ಮಂಡ್ಯ

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ – ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್..!

Published

on

ಮಳವಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಯಡಿಯೂರಪ್ಪ ಅವರೇ ಅವಧಿ ಮುಗಿಯುವರೆಗೂ ಸಿಎಂ ಆಗಿ ಇರಲಿದ್ದಾರೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು. ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ರಾಮನಗರ ಜಿಲ್ಲೆಗೆ ಕುಡಿಯುವ ನೀರಾವರಿ ಹಾಗೂ ರೈತರ ಜಮೀನಿಗೆ ಸುರಂಗ ಮಾರ್ಗವಾಗಿ 540 ಕೋಟಿ ರೂ ಕಾಮಗಾರಿ ಯೋಜನೆಯನ್ನು ಪರಿಶೀಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇನ್ನೂ ಎರಡೂವರೆ ವರ್ಷ ಬಿ.ಎಸ್.\ಯಡಿಯೂರಪ್ಪ ಅವರು ಮುಂದುವರೆಯಲಿದ್ದು, ಅವಧಿ ಮುಗಿಯುವವರೆಗೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು ಪಕ್ಷದ ವರಿಷ್ಟರು ತಿಳಿಸಿದ್ದಾರೆ ಎಂಬ ಮಾಹಿತಿಯನ್ನು ಹೊರಹಾಕಿದರು. ಜಗದೀಶ್ ಶೆಟ್ಟರ್ ಅವರ ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವುದು ಬೇಡ.ಪಕ್ಷ ಸಂಘಟನೆ ವಿಚಾರವಾಗಿ ಪಕ್ಷದ ಅರ್ಥ ಕಲ್ಪಿಸುವುದು ಬೇಡ. ದೆಹಲಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಅಲ್ಲದೇ ಅಭಿವೃದ್ಧಿ ಕೆಲಸಗಳಿಗಾಗಿ ವಿವಿಧ ಇಲಾಖೆಯ ಕೇಂದ್ರ ಸಚಿವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ ಎಂದು ಸ್ಪಷ್ಟಪಡಿಸಿದರು.ಯಡಿಯೂರಪ್ಪ ಹಾಗೂ ಕುಮಾರಸ್ವಾಮಿ ಅವರು ರಹಸ್ಯ ಭೇಟಿಯಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಕೆಲಸಗಳ ಬಗ್ಗೆ ಭೇಟಿಯಾಗಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸಬಾರದು ಯಾರೇ ಸಿಎಂ ಆಗಿದ್ದರೂ ಎಲ್ಲ ಪಕ್ಷ ಮುಖಂಡರು ಅಭಿವೃದ್ಧಿ ವಿಚಾರದಲ್ಲಿ ಭೇಟಿ ಮಾಡುತ್ತಾರೆ ಇದಕ್ಕೆ ರಾಜಕೀಯ ಬಣ್ಣ ಹಂಚಬಾರದು ಎಂದರು. ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಸುರೇಶ್ ಅವರ ಹೇಳಿಕೆಯು ರಾಜಕೀಯ ಪ್ರಚಾರಕ್ಕಾಗಿ ಅಷ್ಟೇ, ಅವರದೇ ಸರ್ಕಾರ ಇದ್ದಾಗ ಏಕೆ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲಿಲ್ಲ. ತನಿಖೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವತಂತ್ರ ನೀಡಲಾಗಿದೆ. ಎಷ್ಟೇ ದೊಡ್ಡ ದೊಡ್ಡ ವ್ಯಕ್ತಿಗಳಿದ್ದರೂ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.ರಾಜಕೀಯ ನಾಯಕರಿದ್ದರೂ ಯಾರನ್ನೂ ಬಿಡುವುದಿಲ್ಲ. ಎಷ್ಟೇ ಪ್ರಭಾವಿಗಳಿದ್ದರೂ ತನಿಖೆ ನಡೆದೇ ನಡೆಯುತ್ತದೆ ಎಂದು ಹೇಳಿದರು.ಇನ್ನೂ ಮಳವಳ್ಳಿ ಕ್ಷೇತ್ರದ ಯೋಜನೆಯನ್ನು ತಡೆ ಹಿಡಿದಿದ್ದಾರೆ ಎಂದು ಶಾಸಕರ ಆರೋಪದ ಬಗ್ಗೆ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಸಚಿವರು ನಿಮಗೆ ಗೊತ್ತಿದೆ ನಮ್ಮ ಸರ್ಕಾರ ಅಧಿಕಾರ ಬಂದ ಮೇಲೆ ಪ್ರವಾಹ, ಕೋವಿಡ್ 19 ಹೀಗೆ ಬಂದು ಸ್ವಲ್ಪ ವಿಳಂಬವಾಗಿರಬಹುದು. ಯಾವುದೇ ಕಾರಣಕ್ಕೂ ತಡೆಯಾಗುವುದಿಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಯೋಜನೆಗಳ ಅನುದಾನ ಬಿಡುಗಡೆಯಾಗಲಿದೆ ಎಂದರು. ಇನ್ನೂ ಈ ವೇಳೆ ನೀರಾವರಿ ಇಲಾಖೆ ಎಲ್ಲಾ ಅಧಿಕಾರಿಗಳ,ತಾಲ್ಲೂಕು ಅಧಿಕಾರಿಗಳು, ಬಿಜೆಪಿ ಮುಖಂಡ ಹೆಚ್.ಆರ್ ಅಶೋಕ್ ಕುಮಾರ್, ಜಿಲ್ಲಾ ಪ್ರಧಾನಕಾರ್ಯದರ್ಶಿ ಹೆಬ್ಬಣಿ ಬಸವರಾಜು, ರಾಜ್ಯ ರೈತ ಮೋರ್ಚಾ ಕಾರ್ಯಕಾರಣಿ ಸದಸ್ಯ ಡಾ. ಯಮದೂರು ಸಿದ್ದರಾಜು ಸೇರಿದಂತೆ ಮತ್ತಿತ್ತರರು ಉಪಸ್ಥೀತರಿದ್ದರು.

ವರದಿ-ಎ.ಎನ್ ಲೋಕೇಶ್ ಎಕ್ಸ್ ಪ್ರೆಸ್ ಟಿವಿ ಮಳವಳ್ಳಿ

Click to comment

Trending

Exit mobile version