ಕೊರೊನಾ ಸೊಂಕು ನಿಯಂತ್ರಿಸಲು ಗ್ರಾಮಗಳಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು- ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್ ಮಂಜುನಾಥ ಕರೆ..!

ಪಿರಿಯಾಪಟ್ಟಣ: ಕೊರೋನಾ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಹಳ್ಳಿಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡುವಂತೆ ಮೈಸೂರು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ಕೆ ಎಸ್ ಮಂಜುನಾಥ ಕರೆ ನೀಡಿದರು. ಪಿರಿಯಾಪಟ್ಟಣ ತಾಲ್ಲೂಕಿನ ಅತ್ತಿಗೋಡು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ 2019-20 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೊರೋನಾ ಮಹಾಮಾರಿ ಅತ್ಯಂತ ವೇಗವಾಗಿ ಸಮುದಾಯಕ್ಕೆ ಹರಡುತ್ತಿರುವುದರಿಂದ ಸಾರ್ವಜನಿಕರು ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರು ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕರೆತರದೆ ಮಕ್ಕಳ ಮನೆ ಮನೆಗೆ ತೆರಳಿ ಅಗತ್ಯ ಪೋಷಕಾಂಶಗಳ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಬೇಕು ಏನಾದರೂ ದುರುಪಯೋಗ ಕಂಡು ಬಂದಲ್ಲಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಲ್ಲದೆ ಎಲ್ಲಾ ಅಂಗನವಾಡಿ,ಶಾಲಾ ಕೇಂದ್ರಗಳಲ್ಲಿ’ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಿಳಿಸಿದರು.ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕುಮಾರಿ ಶ್ರುತಿ ಮಾತನಾಡಿ ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಪಾವತಿಸಿ ಪಂಚಾಯಿತಿ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನು ಬಿ ಆರ್ ಮಾತನಾಡಿ ಪಂಚಾಯಿತಿಗೆ 2019-20 ನೇ ಸಾಲಿನಲ್ಲಿ 1, 37, 35, 614 ರೂಪಾಯಿ ಆದಾಯ ಬಂದಿದ್ದು 98, 66, 217 ರೂಪಾಯಿ ಖರ್ಚಾಗಿದೆ ಎಂದು ಸಭೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ್ ,ಲೆಕ್ಕ ಸಹಾಯಕ ಮೋಹನ್ ಮೂರ್ತಿ , ಕಾರ್ಯದರ್ಶಿ ಶಿವಣ್ಣ ,ಕರ ವಸೂಲಿಗಾರ ಶಿವಣ್ಣ ,ಅಂಗನವಾಡಿ ಕಾರ್ಯಕರ್ತರು,ಹಾಗೂ ಸಾರ್ವಜನಿಕರು ಹಾಜರಿದ್ದರು..

ವರದಿ :- ಮಾಗಳಿರಾಮೇಗೌಡ ಎಕ್ಸ್ ಪ್ರೆಸ್ ಟಿವಿ ಪಿರಿಯಾಪಟ್ಟಣ

Please follow and like us:

Related posts

Leave a Comment