ಹಾವೇರಿ

ಯಾರೋ ಮಾಡಿದ ತಪ್ಪಿಗೆ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ: ಬಿ.ಸಿ.ಪಾಟೀಲ್..!

Published

on

ಹಾವೇರಿ: ಯಾರೋ ಒಬ್ಬರು ಜಮೀನಿನಲ್ಲಿ ಗಾಂಜಾ ಬೆಳೆದು ತಪ್ಪು ಮಾಡಿದರು ಎಂದ ಮಾತ್ರಕ್ಕೆ ಅನ್ನಕೊಡುವ ಇಡೀ ರೈತ ಸಮುದಾಯವನ್ನು ದೂಷಿಸುವುದು ಸರಿಯಲ್ಲ.ರೈತರು ನಾಡಿನ ಅನ್ನದಾತರು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್,ಆ್ಯಪ್ ಬೆಳೆ ಸಮೀಕ್ಷೆ ಪ್ರಾಯೋಗಿಕ ಹಂತದಲ್ಲಿಯೇ ಯಶಸ್ವಿಯಾಗುತ್ತಿರುವುದು ಹೆಮ್ಮೆಯ ವಿಚಾರ.2017ರಲ್ಲಿ ಬೆಳೆ ಸಮೀಕ್ಷೆ ಮಾಡಿದಾಗ ಸುಮಾರು 3 ಸಾವಿರ ರೈತರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಆದರೀಗ ಆ್ಯಪ್ ಬೆಳೆಸಮೀಕ್ಷೆಯಲ್ಲಿ ಸೆ.11 ರ ಸಂಜೆವರೆಗೆ 76ಲಕ್ಷ ತಾಕುಗಳು ಸಮೀಕ್ಷೆಯಾಗಿರುವುದು ಹಮ್ಮೆಯ ವಿಚಾರ.ರೈತರು ಬಹಳ ಆಸಕ್ತಿಯಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರೈತರು ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಆ್ಯಪ್ ಬೆಳೆ ಸಮೀಕ್ಷೆ ನಡೆಸುವುದು ಅತ್ಯವಶ್ಯಕ ಎಂದರು. ಕೆಲವೇಡೆ ನೆಟ್ ಪ್ರಾಬ್ಲಂನಿಂದಾಗಿ ತಡವಾಗಿದೆ. ಈಗ ಖಾಸಗಿ ನಿವಾಸಿಗಳ ಮೂಲಕವೂ ಸಮೀಕ್ಷೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ನಟರಾಗಲೀ, ನಟಿಯರಾಗಲೀ ಯಾರೂ ತಪ್ಪುಮಾಡಿದರೂ ಅದು ತಪ್ಪೇ. ಡ್ರಗ್ಸ್ ದಂಧೆ ತನಿಖೆ ನಡೆಯುತ್ತಿದೆ. ಅಪರಾಧಿಗಳಾರು ಎಂಬುದು ತನಿಖೆಯಿಂದ ಪತ್ತೆಯಾಗಲಿದೆ. ಈ ಹಿಂದೆ ತಮ್ಮ ಅವಧಿಯಲ್ಲಿನ ಚಿತ್ರರಂಗದಲ್ಲಿ ಪರಿಶುದ್ಧ ವಾತಾವರಣವಿತ್ತು.ಶೂಟಿಂಗ್ವೇಳೆಯಲ್ಲಿ ಸಣ್ಣತಪ್ಪಾದರೂ ಪಶ್ಚಾತ್ತಾಪ ಪಡುವಂತಹ ವಾತಾವರಣವಿತ್ತು. ಈಗ ಚಿತ್ರರಂಗದಲ್ಲಿ ಡ್ರಗ್ ವಿಚಾರ ಕೇಳಿಬಂದಿರುವುದು ಬೇಸರದ ಸಂಗತಿ. ಈ ಹಾವಳಿ ಎಲ್ಲಾ ಎಂಗದಲ್ಲಿಯೂ ಇದೆ. ಚಿತ್ರರಂಗದಲ್ಲಾಗಿರುವುದು ಬಹಳ ಬೇಗ ಎದ್ದು ಕಾಣುತ್ತದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.

ವರದಿ- ಸುಪ್ರಿಯಾ ಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು..

Click to comment

Trending

Exit mobile version