ಬೆಳಗಾವಿ

ಅಧ್ಯಯನ ವರದಿ ಆಧರಿಸಿ ಕೇಂದ್ರ ಸರ್ಕಾರದಿಂದ ಪರಿಹಾರ ಬಿಡುಗಡೆ..!

Published

on

ಬೆಳಗಾವಿ: ಕೇಂದ್ರದ ಅಧ್ಯಯನ ತಂಡ ರಾಜ್ಯದ ನೆರೆ ಸಮೀಕ್ಷೆ ನಡೆಸಿದ್ದು ಕೇಂದ್ರದ ವರದಿಯಾನುಸಾರ ಬೆಳೆನಷ್ಟ ಪರಿಹಾರ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.ಬಿ.ಸಿ ಪಾಟೀಲ್ ಇಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಛೇರಿ ಗೆ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರು ಹಾಗೂ ರೈತ ಮೊರ್ಚಾ ಮುಖಂಡರ ಜೊತೆ ಕೃಷಿ ಇಲಾಖೆ ಕಾರ್ಯಗಳು ರೈತ ಬೆಳೆ ಸಮೀಕ್ಷೆ ಸೇರಿದಂತೆ ಪಕ್ಷ ಸಂಘಟನೆ ಕುರಿತು ಚರ್ಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪರಿಹಾರ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಪ್ರಯತ್ನ ಮಾಡುತ್ತಿದ್ದಾರೆ. ಕೇಂದ್ರದ ಅಧ್ಯಯನ ವರದಿ ನೋಡಿ ಪರಿಹಾರ ಬಿಡುಗಡೆಯಾಗಲಿದೆ.ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ನಡೆಸಲಾಗುತ್ತಿದ್ದು,ರೈತರೇ ತಮ್ಮ ಬೆಳೆ ಸಮೀಕ್ಷೆ ನಡೆಸಿ ತಾವೇ ಪ್ರಮಾಣಪತ್ರ ನೀಡುವಂತಹ ಈ ಹೊಸ ಪ್ರಯೋಗ ದೇಶಾದ್ಯಂತ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೇಲ್ಮನೆಯ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ನೀಡಿರುವ ಬಿಜೆಪಿಯ ದೊಡ್ಡದೊಡ್ಡ ನಾಯಕರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಬಿ.ಸಿ.ಪಾಟೀಲ್, ಹರಿಪ್ರಸಾದ್ ಏನೂ ಬ್ರಹ್ಮನಲ್ಲ. ವಿನಾಕಾರಣ ಬಾಯಿಗೆ ಬಂದಂತೆ ಆರೋಪ ಮಾಡುವುದು ಅವರಿಗೆ ಶೋಭೆತರುವುದಿಲ್ಲ ಎಂದರು.

ವರದಿ-ಸುಪ್ರಿಯಾಶರ್ಮಾ ಎಕ್ಸ್ ಪ್ರೆಸ್ ಟಿವಿ ಬೆಂಗಳೂರು

Click to comment

Trending

Exit mobile version