Uncategorized

ವಿಷಯುಕ್ತ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿ ಸಾವು..!

Published

on

ತುಮಕೂರು : ರಾಸಾಯನಿಕ ಮಿಶ್ರಿಯ ನೀರು ಸೇವಿಸಿ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ತುಮಕೂರಿಗೆ ಹತ್ತಿರವಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಇದಕ್ಕೆ ಕಾರಣ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತುಮಕೂರು ಇವರ ನಿರ್ಲಕ್ಷವೇ ಕಾರಣ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗ್ರಾಮದ ಶಿವಣ್ಣ ಸಿದ್ದಗಂಗಯ್ಯ ಗಂಗಮ್ಮ ಅವರು ಸಂಜೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದ ಮಾರ್ಗವಾಗಿ ತಮ್ಮ ಕುರಿಗಳನ್ನು ಹೊಡೆದುಕೊಂಡು ಬರುತ್ತಿದ್ದರು. ಈ ವೇಳೆ ಗುಂಡಿಯೊಂದರಲ್ಲಿ ನಿಂತಿದ್ದ ವಿಷ ಮಿಶ್ರಿತ ನೀರು ಸೇವಿಸಿ ಸ್ಥಳದಲ್ಲೇ 22ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲವು ಕೈಗಾರಿಕೆಗಳಲ್ಲಿ ತ್ಯಾಜ್ಯವನ್ನು ನೇರವಾಗಿ ಪರಿಸರಕ್ಕೆ ಬಿಡುತ್ತಿದ್ದಾರೆ ಹಾಗೂ ನೀರಿಗೆ ಬೆರೆಸಿ ಕೆರೆ-ಕಟ್ಟೆಗಳಿಗೆ ಹರಿಸುತ್ತಾರೆ ಇದರ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅವರಿಗೆ ಬಹಳಷ್ಟು ಬಾರಿ ಮನವಿ ಮಾಡಿದ್ದರೂ ಕ್ಯಾರೆ ಎನ್ನುತ್ತಿಲ್ಲ ಕಾರಣ ಮಾಲಿನ್ಯ ಅಧಿಕಾರಿಗಳ ನಿರ್ಲಕ್ಷ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್ ರವರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಭಾರತೀಯ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷರಾದ ಕೋಡಿಹಳ್ಳಿ ಜಗದೀಶ್ ಕೋರಾ ಪೊಲೀಸ್ ಠಾಣೆ ಪೊಲೀಸರು ಹಾಗೂ ಪಶು ವೈದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೈಗಾರಿಕಾ ಪ್ರದೇಶ ಗಳಿಂದ ಬಿಡುವ ವಿಷಯುಕ್ತ ತ್ಯಾಜ್ಯ ನೀರಿಗೆ ಸೇರಿದ್ದು ಅದನ್ನು ಕುರಿಗಳು ಸೇವಿಸಿದ್ದರಿಂದ ಘಟನೆ ಸಂಭವಿಸಿದೆ ಎಂದು ಪಶು ವೈದ್ಯರಾದ ಲೋಕೇಶ್ ರವರು ಹಾಗೂ ಕೋರಾ ಪೊಲೀಸ್ ಠಾಣೆಯ ಪೊಲೀಸರು ಶಂಕಿಸಿದ್ದಾರೆ ,

ವರದಿ-ಶ್ರೀಮಂತ್ ಎಕ್ಸ್ ಪ್ರೆಸ್ ಟಿವಿ ತುಮಕೂರು

Click to comment

Trending

Exit mobile version